ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು
ಬೆಂಗಳೂರಿನಲ್ಲಿ ಶನಿವಾರವೇ ಮಳೆ ಪ್ರಾರಂಭವಾಗಿದ್ದು, ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್ ಹಾಗೂ ಗೊರಗುಂಟೆ ಪಾಳ್ಯದ ಸುತ್ತಮುತ್ತ ಮಳೆಯಾಗಿದೆ. ವಾತಾವರಣ ಇದೇ ರೀತಿ 3 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ