ಶಿವಮೊಗ್ಗ: ಶಾಸಕ ಆರಗ ಜ್ಞಾನೇಂದ್ರ (Araga Jnanendra) ಅವರ ನೇತೃತ್ವದ ಬಿಜೆಪಿ ಪ್ರವಾಹ ಅಧ್ಯಯನ ತಂಡವು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ, ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿತು.
ಕೆಲವು ದಿನಗಳ ಹಿಂದೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹಾದಿಗಲ್ಲಿಯಲ್ಲಿ ಮರ ಬಿದ್ದು ಅಸುನೀಗಿದ ಸಚಿನ್ ಅವರ ಮನೆಗೆ ತಂಡವು ನೀಡಿತು. ಅಲ್ಲಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಮಾತನ್ನಾಡಿದರು. ಇದನ್ನೂ ಓದಿ: ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ಮತ್ತೆ ಬಂದ್ – ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ
ಸರ್ಕಾರದ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯ 5 ಲಕ್ಷ ರೂ. ಮಂಜೂರಾತಿ ಆದೇಶ ಪ್ರತಿಯನ್ನು ನೀಡಿದರು. ಅಲ್ಲದೇ ವೈಯಕ್ತಿಕ ಸಹಾಯವನ್ನೂ ಮಾಡಿದರು.
ನಿಯೋಗದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವ ಹರತಾಳ ಹಾಲಪ್ಪ, ಶಿವಮೊಗ್ಗ ನಗರದ ಶಾಸಕ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು