Advertisements

PSI Scam – ತಪ್ಪಿತಸ್ಥರು ಮುಟ್ಟಿನೋಡ್ಕೋಬೇಕು ಹಾಗೆ ಮಾಡ್ತಿವಿ: ಆರಗ ಜ್ಞಾನೇಂದ್ರ

ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

Advertisements

ಕಾಂಗ್ರೆಸ್‍ನವರು ಆರೋಪ ಮಾಡುತ್ತಿದ್ದಾರೆ. ದಾಖಲಾತಿ ಕೇಳಿದರೆ ಓಡಿಹೋಗುತ್ತಾರೆ. ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ, ತನಿಖೆಯ ದಿಕ್ಕೂ ತಪ್ಪಿಸುವುದೊಂದೇ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 70 ವಯಸ್ಸಿನ ಬುದ್ಧಿಮಾಂದ್ಯ ವೃದ್ಧೆಯನ್ನು ಅಪಹರಿಸಿ ಅತ್ಯಾಚಾರ

Advertisements

ಕಲಬುರಗಿಯಲ್ಲಿ ಮಾತನಾಡಿದ ಅವರು, ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ 300 ಕೋಟಿ ಅಕ್ರಮ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ, ಸಿದ್ದರಾಮಯ್ಯ 300 ಕೋಟಿ ಅಲ್ಲ 3,000 ಕೋಟಿ ಆರೋಪ ಮಾಡಲಿ, ಮಾತನಾಡುವುದಕ್ಕೆ ಅವರಿಗೆ ವಾಕ್ ಸ್ವಾತಂತ್ರವಿದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೇ.19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ

ನಿರಾಧಾರವಾಗಿ ಆರೋಪ ಮಾಡುವುದು, ದಾಖಲಾತಿ ಕೇಳಿದರೆ ಓಡಿಹೋಗುವುದು ಕಾಂಗ್ರೆಸ್ ಕೆಲಸವಾಗಿದೆ. ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್‍ನವರು. ತನಿಖೆ ಸರಿಯಾಗಿ ನಡೆದರೆ ತಮ್ಮ ಬುಡಕ್ಕೆ ಬರುತ್ತದೆ ಎನ್ನುವುದು ಗೊತ್ತಾಗಿ ತನಿಖೆ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಅಂತ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸದ್ಯ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದಿದ್ದಾರೆ.

Advertisements

Advertisements
Exit mobile version