ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಟೀಕಿಸುವಾಗ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕಿಡಿಕಾರಿದರು.
ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಸಂಭೋದಿಸಿ, ಸಿದ್ದರಾಮಯ್ಯ ಅವರು ಆಡಿದ ಮಾತುಗಳು, ಸಾಂಸ್ಕೃತಿಕ ಪ್ರಜ್ಞೆ ಇರುವ ಎಲ್ಲರ ಮನ ನೋಯಿಸಿದೆ ಎಂದು ಹೇಳಿದರು. ಇದನ್ನೂ ಓದಿ: ರಸ್ತೆ ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಬಿಜೆಪಿ ನಾಯಕರಿಗಿಲ್ಲ: ಯು.ಟಿ. ಖಾದರ್
ಸಿದ್ದರಾಮಯ್ಯನವರ (Siddaramaiah) ವರ್ತನೆಯನ್ನು ಖಂಡಿಸುತ್ತೇನೆ. ಅವರು ಆಡಿದ ಮಾತುಗಳಿಗೆ, ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ತಂದಿಟ್ಟು ತಮಾಷೆ ನೋಡುವ ಕಲೆ ಕುಮಾರಸ್ವಾಮಿ ಅವರಿಗೆ ಸಿದ್ಧಿಸಿದೆ: ಬಿಜೆಪಿ ಕಿಡಿ