ಬೆಂಗಳೂರು: ಶಿವಮೊಗ್ಗ (Shivamogga), ಚಿಕ್ಕಮಗಳೂರು (Chikkamagaluru) ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯಾದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ (Areca Leaf Dot Disease) ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಾಳೆ ದೆಹಲಿಗೆ (New Delhi) ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಎಲೆ ಚುಕ್ಕೆ ರೋಗವು ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ. ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕ ಕೊಡುಗೆ ಗುರಿ – ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ
ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸಂಸದ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ ಹಾಗೂ ಇತರ ಗಣ್ಯರು ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ರೋಗಪೀಡಿತ ಅಡಿಕೆ ತೋಟಗಳಿಗೆ ಭೇಟಿ ನೀಡಿ ರೈತರು, ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಹಾಗೂ ಇತರರ ಜೊತೆ ಸಮಾಲೋಚನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಟಿಎಸ್ ರಜತೋತ್ಸವ – ಕೇಂದ್ರ ಐಟಿ ಸಚಿವ ವೈಷ್ಣವ್‍ಗೆ ಆಹ್ವಾನ