Bengaluru CityLatestMain Post

ಜನಸಾಮಾನ್ಯರಿಗೊಂದು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ

Advertisements

ಬೆಂಗಳೂರು: ಇಡೀ ರಾಜ್ಯಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೊಂದು ಕಾನೂನು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿರುವ ಕುರಿತಾಗಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಕುರಿತಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಇಡೀ ರಾಜ್ಯಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನಸಾಮಾನ್ಯರಿಗೆ ಒಂದು, ಕಾಂಗ್ರೆಸ್‌ಗೆ ಒಂದು  ಕಾನೂನು ಇಲ್ಲ. ಎಲ್ಲರಿಗೂ ಒಂದೇ ಕಾನೂನು ಇದೆ. ಆದರೆ ಕಾಂಗ್ರೆಸ್ ಕಾನೂನು ಮೀರಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್‍ನವರನ್ನು ಜನ ಗಮನಿಸುತ್ತಿದ್ದಾರೆ. ಐದು ವರ್ಷ ಆಡಳಿತ ನಡೆಸಿದಾಗ ಕಾಂಗ್ರೆಸ್‍ಗೆ ಮೇಕೆದಾಟು ನೆನಪಾಗಲಿಲ್ಲ. ಅಧಿಕಾರದಲ್ಲಿದ್ದಾಗ ಮೇಕೆದಾಟು ಮರೆತಿದ್ದ ಕಾಂಗ್ರೆಸ್ ಜನರಲ್ಲಿ ಕ್ಷಮೆ ಕೇಳಬೇಕು. ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರ ಜಿಲ್ಲಾಡಳಿತಕ್ಕೆ ನೀಡಿದ್ದೇವೆ.  ಯಾವ ಕ್ರಮ ಅಂತ ಆಮೇಲೆ ಗೊತ್ತಾಗುತ್ತದೆ ಎಂದು ವಿರೋಧ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published.

Back to top button