Dakshina KannadaDistrictsKarnatakaLatestLeading NewsMain PostShivamogga

ಪ್ರವೀಣ್‌ನನ್ನು ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಆರಗ ಜ್ಞಾನೇಂದ್ರ

Advertisements

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್‍ಕುಮಾರ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಶೀಘ್ರದಲ್ಲೇ ಆರೋಪಿಗಳನ್ನು ಹಿಡಿದು ತರುವ ಪ್ರಯತ್ನದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹೆಲ್ಮೆಟ್ ಧರಿಸದೇ ಬೈಕ್ ರ‍್ಯಾಲಿ ನಡೆಸಿದ್ದ ಬಿಜೆಪಿಗೆ ಸಂಸದನಿಗೆ ಬಿತ್ತು 20 ಸಾವಿರ ರೂ. ದಂಡ

ಏನಿದು ಘಟನೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಮಲೇಷ್ಯಾಗೆ 18 ತೇಜಸ್‌ ವಿಮಾನ – ಅಮೆರಿಕ ಸೇರಿದಂತೆ 6 ರಾಷ್ಟ್ರಗಳಿಂದ ಖರೀದಿಗೆ ಆಸಕ್ತಿ

Live Tv

Leave a Reply

Your email address will not be published.

Back to top button