ಬೆಂಗಳೂರು: ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕಾಲೇಜುಗಳ ಆರಂಭ ವಿಚಾರ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೇಸ್‍ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಗೃಹ ಸಚಿವರು, ರಾಜ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆದಿದೆ. ಬುಧವಾರದಿಂದ ಪಿಯು ಮತ್ತು ಡಿಗ್ರಿ ಕಾಲೇಜ್ ಗಳು ಓಪನ್ ಆಗಲಿವೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್ ಶಾಸಕಿ
Advertisement
Advertisement
ಕೋರ್ಟ್ ಸೂಚನೆಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮ ಮುಖ್ಯ ಎಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ ಶಿವಮೊಗ್ಗ ವಿದ್ಯಾರ್ಥಿನಿಯರು
Advertisement
Advertisement
ಒಟ್ಟಿನಲ್ಲಿ ಇಂದು ಪ್ರೌಢಶಾಲಾ ತರಗತಿಯ ಆರಂಭವಾಗಿದೆ. ಕೆಲ ಪ್ರೌಢಶಾಲೆಗಳಲ್ಲಿ ಹಿಜಾಬ್ ಸಂಘರ್ಷ ಮುಂದುವರಿದಿದೆ. ಜೊತೆಗೆ ಪಿಯು ಮತ್ತು ಡಿಗ್ರಿ ಕಾಲೇಜು ಆರಂಭ ವಿಚಾರವಾಗಿ ಇಂದು ಸಿಎಂ ಚರ್ಚೆ ನಡೆಸಿದರು. ಸಭೆಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹಾಗೂ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.