ಶಿವಮೊಗ್ಗ: ಸನಾತನ ಧರ್ಮವನ್ನು (Sanatana Dharma) ಕ್ಷೀಣ ಮಾಡಿ, ನಮ್ಮ ಧರ್ಮವನ್ನು ಜಾಸ್ತಿ ಮಾಡಿಕೊಳ್ಳಬೇಕು ಎಂದು ಒಂದು ಸಮುದಾಯ ವಿಶೇಷವಾದ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಆರೋಪಿಸಿದ್ದಾರೆ.
ತೀರ್ಥಹಳ್ಳಿಯ (Thirthahalli) ಮಳಲಿ ಮಠದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ, ತಮ್ಮ ಸಂಖ್ಯೆ ಜಾಸ್ತಿ ಮಾಡಿಕೊಂಡು, ತಮ್ಮ ಮತಗಳನ್ನು ಜಾಸ್ತಿ ಮಾಡಿಕೊಳ್ಳಬೇಕು ಎಂದು ಒಂದು ವರ್ಗದವರು ಹೊರಟಿದ್ದಾರೆ ಅಂತವರಿಗೆ ಪಾಠ ಹೇಳಬೇಕಿದೆ. ಒಂದು ವೇಳೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೊಂದು ದಿನ ಬಹಳ ದೊಡ್ಡ ತೊಂದರೆಗೆ ಒಳಗಾಗುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಚು.ಆಯೋಗ ಸೂಚನೆ
- Advertisement
ಇವತ್ತು ಮಾನವ ಧರ್ಮ ಎಂಬುದು ಇಲ್ಲ, ನಮ್ಮ ಧರ್ಮದಲ್ಲಿ ಇದ್ದರೆ ಮಾತ್ರ ಇರಬೇಕು. ಇಲ್ಲದಿದ್ದರೆ ಇಲ್ಲ ಎನ್ನುವಂತಹ ಧರ್ಮಗಳಿಗೆ ಪಾಠ ಹೇಳಬೇಕಿದೆ ಎಂದು ಅವರು ಹೇಳಿದ್ದಾರೆ.
- Advertisement
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370ನೇ ವಿಧಿಯನ್ನು ಯಾರಿಗೂ ತೆಗೆಯಲು ಆಗಿರಲಿಲ್ಲ. ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಅದನ್ನು ಧೈರ್ಯದಿಂದ ಮಾಡಿದ್ದಾರೆ. ನಮ್ಮ ದೇಶದಲ್ಲಿ ಹುಟ್ಟಿ, ಅನ್ನ ತಿಂದು ವಿದೇಶದಿಂದ ಹಣ ಪಡೆದು ಸೇನೆಯ ಮೇಲೆ ಕಲ್ಲು ಹೊಡೆಯುತ್ತಿದ್ದವರು ಇಂದು ಸರಿ ದಾರಿಗೆ ಬರುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ, ವಿಜಯೇಂದ್ರ ನನ್ನನ್ನು ಸೋಲಿಸಲು ಸಾಧ್ಯವಿಲ್ಲ: ಡಿ.ಕೆ ಸುರೇಶ್