ಬೆಂಗಳೂರು: ಮನವಿ ಸಲ್ಲಿಸಲು ಬಂದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ಗದರಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Advertisement
ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ 5 ಶಾಸಕರನ್ನು ಕಳೆದುಕೊಂಡ ನಿತೀಶ್ ಕುಮಾರ್ – ಜೆಡಿಯು ಎಂಎಲ್‌ಎಗಳು ಬಿಜೆಪಿಯೊಂದಿಗೆ ವಿಲೀನ
Advertisement
Advertisement
ನಡೆದಿದ್ದೇನು?
ಮಹಿಳೆ : ಸರ್ ಒಂದು ನಿಮಿಷ ಸರ್…
ಶಾಸಕ ಅರವಿಂದ ಲಿಂಬಾವಳಿ: ಹೇ.. ಕೊಡಮ್ಮ ಇಲ್ಲಿ…. ಹೇಯ್…. ಕೊಡೆ ಇಲ್ಲಿ…
ಮಹಿಳೆ: ಸರ್ ಇದು ಡಾಕ್ಯುಮೆಂಟ್… ಸ್ವಲ್ಪ ಇರಿ ಸರ್. ಕೇಳಿಸ್ಕೊಳಿ..
ಶಾಸಕ ಅರವಿಂದ ಲಿಂಬಾವಳಿ: ಹೇ.. ಇವಳನ್ನು ಪೊಲೀಸ್ ಕರೆಸಿ ಕಳಿಸು..
ಮಹಿಳೆ: ಇರಿ ಸರ್. ಸ್ವಲ್ಪ ಇರಿ ಸರ್..
ಶಾಸಕ ಅರವಿಂದ ಲಿಂಬಾವಳಿ: ಹೇಯ್… ಏನ್ ಕೇಳಿಸ್ಕೊಳೋದು.. ಮುಚ್ಚುಬಾಯಿ…
ಮಹಿಳೆ: ಸರ್ ಏನ್ ಸರ್.. ಸ್ವಲ್ಪ ಮರ್ಯಾದೆ ಕೊಡಿ… ಮಹಿಳೆ ಅಂತಾ…
ಶಾಸಕ ಅರವಿಂದ ಲಿಂಬಾವಳಿ: ಏನ್ ಮರ್ಯಾದೆ ನಿಂಗೆ.. ಒತ್ತುವರಿ ಮಾಡಿದ್ದಲ್ಲದೇ, ಮರ್ಯಾದೆ ಬೇರೆ ಕೊಡಬೇಕಾ ನಿಂಗೆ..
ಮಹಿಳೆ: ಸ್ವಲ್ಪ ಡಾಂಕ್ಯುಮೆಂಟ್ ಪರಿಶೀಲಿಸಿ ನೋಡಿ ಸರ್.. ಆಮೇಲೆ ತೀರ್ಮಾನ ಮಾಡಿ.. ನಾನೆಲ್ಲಿ ಒತ್ತುವರಿ ಮಾಡಿದ್ದೀನಿ…
ಶಾಸಕ ಅರವಿಂದ ಲಿಂಬಾವಳಿ: ಮರ್ಯಾದೆ ಅಲ್ಲ.. ನಂಗೆ ಬೇರೆ ಭಾಷೆ ಬರುತ್ತದೆ… ಬೇರೆ ಭಾಷೆ ಬಳಸಬೇಕಾಗುತ್ತದೆ…
ಮಹಿಳೆ: ಸರ್ ಹಾಗೆಲ್ಲಾ ಮಾತನಾಡಬೇಡಿ…
ಶಾಸಕ ಅರವಿಂದ ಲಿಂಬಾವಳಿ: ಬೇರೆ ಭಾಷೆ ಬರುತ್ತದೆ ನನಗೆ…
ಮಹಿಳೆ: ಏನ್ ಮಾತನಾಡುತ್ತಿದ್ದೀರಾ ನೀವು… ಬಿಡಲ್ಲ ನಾನು…
ಶಾಸಕ ಅರವಿಂದ ಲಿಂಬಾವಳಿ: ನಾನು ಬಿಡಲ್ಲ ನಿನ್ನ.. ನಡಿ ಪೊಲೀಸ್ ಸ್ಟೇಷನ್‍ಗೆ… ಕತ್ತು ಹಿಡಿದು ಒಳಗೆ ಹಾಕಿಸುತ್ತೇನೆ..
ಮಹಿಳೆ: ಸರ್ ನಾನು ನ್ಯಾಯ ಕೇಳುತ್ತಿದ್ದೇನೆ…
ಶಾಸಕ ಅರವಿಂದ ಲಿಂಬಾವಳಿ: ಒತ್ತುವರಿ ಮಾಡಿ ನ್ಯಾಯ ಕೇಳ್ತಿಯಾ? ನಾಚಿಕೆ ಆಗಲ್ವಾ ನಿನಗೆ
Advertisement
ಇದೀಗ ಶಾಸಕ ಅರವಿಂದ ಲಿಂಬಾವಳಿಯಿಂದ ನಿಂದನೆಗೆ ಒಳಗಾಗಿದ್ದ ಮಹಿಳೆಯ ಮೇಲೆ ಬಿಬಿಎಂಪಿ ಎಂಜಿನಿಯರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ವಿಚಾರಕ್ಕೆ ಕ್ರಮ ಕೈಗೊಳ್ಳಲು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಆರೋಪಿಸಲಾಗಿದೆ. ಇದನ್ನೂ ಓದಿ: 2 ದಿನಗಳಿಂದ ದೇವರ ದರ್ಶನ ಇಲ್ಲ – ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳ ಮಾತು
ಮತ್ತೊಂದೆಡೆ ಶಾಸಕ ಅರವಿಂದ ಲಿಂಬಾವಳಿ ವರ್ತನೆಯನ್ನು ಮಹಾದೇವಪುರ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಅಶೋಕ್ ಮೃತ್ಯುಂಜಯ ಖಂಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ತಪ್ಪು ಮಾಡಿದ್ರೆ ಶಿಕ್ಷಿಸಲು ಕಾನೂನು ಇದೆ. ಇದೇನು ನಿಮ್ಮ ಮಾತುಗಳು? ನಿಮ್ಮ ಸ್ಥಾನಕ್ಕೆ ಶೋಭೆ ತರುವುದೆ? ಅಧಿಕಾರ ಶಾಶ್ವತ ಅಲ್ಲ, ಅದೇತಕೆ ಇಷ್ಟು ದರ್ಪ?’ ಬಯ್ಯೋದಕ್ಕೆ ನೀವ್ಯಾರು ಅಂತಾ ತರಾಟೆಗೆ ತೆಗೆದುಕೊಂಡಿದ್ದಾರೆ.