ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

Public TV
2 Min Read
flex banner high court

– ಅನಧಿಕೃತ ಫ್ಲೆಕ್ಸ್‌ ಕಂಡರೆ ತಲಾ 50,000 ರೂ. ದಂಡ ಹಾಕುವಂತೆ ಸೂಚನೆ

ಬೆಂಗಳೂರು: ರಾಜಧಾನಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತಡೆಗೆ ವಿಫಲವಾಗಿದೆ ಎಂದು ಕ್ರಮ ಕೈಗೊಳ್ಳದ ಬಿಬಿಎಂಪಿ (BBMP), ರಾಜ್ಯ ಸರ್ಕಾರವನ್ನು ಹೈಕೋರ್ಟ್ (Karnataka High Court) ತರಾಟೆ ತೆಗೆದುಕೊಂಡಿದೆ.

ಪ್ರಸನ್ನ ಬಿ. ವರಾಳೆ, ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠವು, ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಚುನಾವಣೆ ವೇಳೆ 60,000 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ 40 ಎಫ್‌ಐಆರ್ ದಾಖಲಿಸಲಾಗಿದೆ. ಉಳಿದ ಪ್ರಕರಣಗಳು ಏನಾಯ್ತು ಎಂದು ಗರಂ ಆಗಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಕಳಿಸೋಣ: ಶಿವಕುಮಾರ್

BBMP

ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ. ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೇ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್‌ಗಳಿಂದ ಕಳಂಕ. ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ? ಬೆಂಗಳೂರಿನ ಸ್ಥಿತಿ ಸುಧಾರಿಸದಿದ್ದರೆ ಹೂಡಿಕೆ ಹೇಗೆ ತರುತ್ತೀರಿ? ಬೆಂಗಳೂರನ್ನು ಅದರ ಅದೃಷ್ಟಕ್ಕೇ ಬಿಡಲಾಗಿದೆ. ಇದು ಅಚ್ಚರಿ, ಆಘಾತಕಾರಿ ಹಾಗೂ ಆತ್ಮಸಾಕ್ಷಿ ಕಲಕುವಂಥದ್ದಾಗಿದೆ. ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ. ನೀವೇನು ಮಾಡುತ್ತಿದ್ದೀರ ಎಂದು ರಾಜ್ಯ ಸರ್ಕಾರಕ್ಕೆ ಸಿಜೆ ಪ್ರಸನ್ನ ಬಿ. ವರಾಳೆ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

ಇನ್ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ರೂ. ದಂಡ ವಿಧಿಸಬೇಕು. ಬಿಬಿಎಂಪಿ, ರಾಜ್ಯ ಸರ್ಕಾರ ತಲಾ 50 ಸಾವಿರ ರೂ. ಠೇವಣಿ ಇಡಬೇಕು. ಫ್ಲೆಕ್ಸ್ ಮೂಲಕ ಶುಭಾಶಯ ಕೋರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಆಡಳಿತದ ಹೊಣೆ ಹೊತ್ತವರು ಈ ಬಗ್ಗೆ ಗಮನಹರಿಸಬೇಕು ಎಂದು ಬಿಬಿಎಂಪಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಾರ್ನಿಂಗ್ ಮಾಡಿದೆ. ಮೂರು ವಾರಗಳಲ್ಲಿ ಕ್ರಮ ಕೈಗೊಂಡ ವರದಿ ಸಲ್ಲಿಕೆಗೆ ಹೈಕೋರ್ಟ್‌ ತಾಕೀತು ಮಾಡಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article