ಹಾಸನ: ಪಾಕಿರ್ಂಗ್ ವಿಚಾರಕ್ಕೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬೇಲೂರಿನ (Belur) ಚೆನ್ನಕೇಶವ ದೇವಾಲಯದ (Chennakeshava Temple) ಆವರಣದಲ್ಲಿ ನಡೆದಿದೆ. ಪಾರ್ಕಿಂಗ್ (Parking) ಶುಲ್ಕ ವಸೂಲಿಗಾರ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮಹಿಳೆ ಮೇಲೆ ಹಲ್ಲೆ ನಡೆಸಿರುವುದರಿಂದ ಆಕೆಯ ಮುಖದ ಮೇಲೆ ಗಾಯವಾಗಿದ್ದು ರಕ್ತ ಸಹ ಬಂದಿದೆ. ಅಲ್ಲದೇ ಈ ವೇಳೆ ಮಧ್ಯ ಪ್ರವೇಶಿಸಿದ ಆಕೆಯ ಮಗನ ಮೇಲೂ ಹಲ್ಲೆ ಮಾಡಲಾಗಿದೆ. ದಾವಣಗೆರೆ ಮೂಲದ ವೀಣಾ ಬಸವರಾಜು ಮೇಲೆ ಹಲ್ಲೆ ನಡೆಸಿರುವ ಫೋಟೋ ವೈರಲ್ ಕೂಡ ಆಗಿದೆ. ಇದನ್ನೂ ಓದಿ: ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಆತ್ಮಹತ್ಯೆ
Advertisement
ವೀಣಾ ಕುಟುಂಬದ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವರ ಪುತ್ರ ಕಾರನ್ನು ಪಾರ್ಕ್ ಮಾಡುತ್ತಿದ್ದ. ಈ ವೇಳೆ ಶುಲ್ಕ ವಸೂಲಿ ಮಾಡುವ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ವೀಣಾ ಹಾಗೂ ಅವರ ಮಗನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ನೆಲಕ್ಕೆ ಬಿದ್ದ ಮಹಿಳೆಗೆ ಮುಖಕ್ಕೆ ಗಾಯವಾಗಿದೆ. ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೊಲಿಗೆ ಹಾಕಿಸಿಕೊಂಡಿದ್ದಾರೆ.
Advertisement
Advertisement
ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡು, ದೇವಾಲಯದ ಬಳಿ ಪ್ರವಾಸಿಗರಿಗೆ ರಕ್ಷಣೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಪ್ರವಾಸಿಗರಿಗೆ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Advertisement
ಪ್ರವಾಸೋದ್ಯಮ ಇಲಾಖೆ (Tourism Department) ಖಾಸಗಿ ವ್ಯಕ್ತಿಗೆ ಪಾರ್ಕಿಂಗ್ ವ್ಯಸ್ಥೆಗೆ ಜಾಗವನ್ನು ಗುತ್ತಿಗೆ ನೀಡಿದೆ. ಪ್ರವಾಸಿಗರ ಮೇಲೆ ಹಲ್ಲೆಯಾದರೂ ಇಲಾಖೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ವಿಚಾರವಾಗಿ ದೂರು ನೀಡಿದರೆ ಬೇರೆ ಜಿಲ್ಲೆಯ ಪ್ರವಾಸಿಗರು ಇಲ್ಲಿಗೆ ಪುನಃ ಓಡಾಡಬೇಕು ಇದು ಕಷ್ಟವಾಗಿದೆ. ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮಗೊಳ್ಳಬೇಕು ಎಂದು ಮಹಿಳೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಾಲ ತೀರಿಸಲಿಕ್ಕಾಗದೇ ಆತ್ಮಹತ್ಯೆ- ಬಿಜೆಪಿ ಕಾರ್ಯಕರ್ತನ ಪ್ರಕರಣಕ್ಕೆ ಸ್ಫೋಟಕ ತಿರುವು
Web Stories