ಬೈಕ್ ಸವಾರನೊಂದಿಗೆ ಜಗಳ – ಸಿಟ್ಟಿನಿಂದ ಜನರ ಮೇಲೆ ಕಾರು ಹರಿಸಿದ

Advertisements

ನವದೆಹಲಿ: ಬೈಕ್ ಸವಾರನೊಂದಿಗೆ (Biker) ಜಗಳವಾಡಿದ ವ್ಯಕ್ತಿಯೊಬ್ಬ ಕೋಪದಲ್ಲಿ ತನ್ನ ಕಾರನ್ನು (Car) ಹಲವು ಜನರ ಮೇಲೆ ಹರಿಸಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ವರದಿಗಳ ಪ್ರಕಾರ ಅಕ್ಟೋಬರ್ 26 ರಂದು ಘಟನೆ ನಡೆದಿದೆ. ಕಿರಿದಾದ ರಸ್ತೆಯಲ್ಲಿ ಬೈಕ್ ಅನ್ನು ನಿಲ್ಲಿಸಿದ್ದಕ್ಕಾಗಿ ಕಾರು ಚಾಲಕ ತಾನು ಮುಂದೆ ಹೋಗಲು ಸಾಧ್ಯವಾಗದೇ ಮೊದಲಿಗೆ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಈ ವೇಳೆ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಇಬ್ಬರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಕೋಪ ತಣ್ಣಗಾಗದ ಕಾರು ಚಾಲಕ ಆಕ್ಸಲೇಟರ್ ಒತ್ತಿ ಅಲ್ಲಿ ನೆರೆದಿದ್ದ ಜನರ ಮೇಲೆ ಓಡಿಸಿದ್ದಾನೆ. ಈ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡಿದೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಎಣ್ಣೆ ಪಾರ್ಟಿ

Advertisements

ಸಿಸಿಟಿವಿ ದೃಶ್ಯಾವಳಿಯ ಸಹಾಯದಿಂದ ಕಾರಿನ ನಂಬರ್ ಪ್ಲೇಟ್ ಮೂಲಕ ಚಾಲಕನನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಮನೆಯಿಂದ ಬಂಧಿಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ 52 ಅಡಿಕೆ ಗಿಡಗಳ ನಾಶ- ಜಮೀನಿನಲ್ಲಿಯೇ ಹೊರಳಾಡಿ ರೈತ ಕಣ್ಣೀರು

2 ದಿನಗಳ ಹಿಂದೆ ಗಾಜಿಯಾಬಾದ್‌ನಲ್ಲಿಯೂ ವಾಹನ ನಿಲುಗಡೆ ಮಾಡಿದ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ನಡೆಸಿದ್ದ.

Advertisements

Live Tv

Advertisements
Exit mobile version