Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೂಟಿಂಗ್ ಮುಗಿಸಿದ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶೂಟಿಂಗ್ ಮುಗಿಸಿದ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

Cinema

ಶೂಟಿಂಗ್ ಮುಗಿಸಿದ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

Public TV
Last updated: September 30, 2024 12:51 pm
Public TV
Share
3 Min Read
45 1 1
SHARE

ಕರುನಾಡ ‌ಚಕ್ರವರ್ತಿ ಶಿವರಾಜಕುಮಾರ್ (Shivaraj Kumar), ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಕುಂಬಳಕಾಯಿ ಒಡೆಯಲಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಪತ್ರಿಕಾಗೋಷ್ಠಿಗೂ ಮುನ್ನ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರನ್ನು ನಿರ್ಮಾಪಕ ರಮೇಶ್ ರೆಡ್ಡಿ ಅವರು ಸನ್ಮಾನಿಸಿದರು.

45 6

ಮೊದಲು ಮಾತನಾಡಿದ ಶಿವರಾಜಕುಮಾರ್ ಅವರು, “45” ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಬಹಳ ಖುಷಿಯಾಗಿದೆ. ಈ ಚಿತ್ರದಲ್ಲಿ ನಾವು ಮೂವರು ನಟಿಸಿದ್ದೇವೆ. ಅವರು ಮುಂದು. ಇವರು ಮುಂದು ಅಂತ ಇಲ್ಲ. ಇಲ್ಲಿ ಎಲ್ಲರು ಒಂದೇ. ಉಪೇಂದ್ರ ಅವರ ಜೊತೆ ನಟಿಸಲು ನಾನು ಯಾವಾಗಲೂ ಸಿದ್ದ. ರಾಜ್ ಬಿ ಶೆಟ್ಟಿ ಅವರ ಜೊತೆಗೆ ನಟಿಸಿದ್ದು ಸಂತೋಷವಾಗಿದೆ.  ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದ ಚಿತ್ರ ಅಂತ ಹೇಳಲಿಕ್ಕೆ ಆಗಲ್ಲ. ಅಷ್ಟು ಅದ್ಭುತ ನಿರ್ದೇಶನ ಅವರದು. ಅಷ್ಟೇ ಅದ್ದೂರಿಯಾಗಿ ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಮೂಡಿಬಂದಿರುವ ಸಾಹಸ ಸನ್ನಿವೇಶಗಳು ಸೂಪರ್. “45” ಇಡೀ ಭಾರತೀಯರೆ ಮೆಚ್ಚುವಂತಹ ಆಕ್ಷನ್ ಚಿತ್ರವಾಗಲಿದೆ ಎಂದರು.

45 3

ಕಥೆಯನ್ನು ಅನಿಮೇಷನ್‌ ಮೂಲಕ ಹೇಳಿದ್ದನ್ನು ನಾನು ಹಾಲಿವುಡ್ ನಲ್ಲಿ ಕೇಳಿದ್ದೆ. ಆದರೆ ಅರ್ಜುನ್ ಜನ್ಯ ಅವರು ಕನ್ನಡದಲ್ಲೇ ಅದನ್ನು ಮಾಡಿ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ಅನಿಮೇಷನ್‌ ಮೂಲಕ ಕಥೆ ಹೇಳಿದ ರೀತಿಯಲ್ಲೇ ಚಿತ್ರವನ್ನೂ ಮಾಡಿದ್ದಾರೆ. ಅರ್ಜುನ್ ಜನ್ಯ ಅವರು ಅಂದುಕೊಂಡಂತೆ ಚಿತ್ರ ಮಾಡಲು ನಿರ್ಮಾಪಕ ರಮೇಶ್ ರೆಡ್ಡಿ ಸಾಥ್ ನೀಡಿದ್ದಾರೆ. ಶಿವಣ್ಣ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಅಭಿನಯಿಸಿದ್ದು ಸಂತಸವಾಗಿದೆ ಎಂದು ತಿಳಿಸಿದ ನಟ ಉಪೇಂದ್ರ, ಚಿತ್ರೀಕರಣ ಮುಗಿದಿದೆ. ಚಿತ್ರವನ್ನು ಅದಷ್ಟು ಬೇಗ ತೆರೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು.

45 2 1

ಶಿವಣ್ಣ ಅವರ ಚಿತ್ರಗಳನ್ನು ನೋಡುತ್ತಾ ವಿಷಲ್ ಹೊಡೆಯುತ್ತಿದ್ದೆ. ಉಪೇಂದ್ರ ಅವರ “A” ಚಿತ್ರದ ಪೋಸ್ಟರನ್ನು ಬೆರಗಾಗಿ ನೋಡುತ್ತಿದ್ದೆ. ಅವರಿಬ್ಬರ ಅಭಿಮಾನಿ ನಾನು. ಇಂದು ಅವರ ಜೊತೆಗೆ ನಟಿಸಿರುವುದು ನನ್ನ ಭಾಗ್ಯ. ಇನ್ನು “45”, ಕನ್ನಡಿಗರು ಹೆಮ್ಮೆಯ ಪಡುವ ಸಿನಿಮಾ ಅಂತ ಕನ್ನಡಿಗನಾಗಿ ಹೇಳುತ್ತೇನೆ. ಈ ಸಿನಿಮಾದಲ್ಲಿ ನಟಿಸಿದ್ದು ನನಗೂ ಹೆಮ್ಮೆಯಿದೆ ಎಂದರು ರಾಜ್ ಬಿ ಶೆಟ್ಟಿ.

45 5

“45” ಚಿತ್ರವನ್ನು ದೇವಸ್ಥಾನವೆಂದು ಮಾತು ಆರಂಭಿಸಿದ ನಿರ್ದೇಶಕ ಅರ್ಜುನ್ ಜನ್ಯ, ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರ ಇದ್ದ ಹಾಗೆ. ರಮೇಶ್ ರೆಡ್ಡಿ ಅವರು ಈ ದೇವಸ್ಥಾನ ಕಟ್ಟಿದವರು. ಛಾಯಾಗ್ರಾಹಕ ಸತ್ಯ ಹೆಗಡೆ ಪ್ರಧಾನ ಪುರೋಹಿತರು. ಹೀಗೆ ಇವರೆಲ್ಲರ ಸಹಕಾರದಿಂದ 106 ದಿನಗಳ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಮುಂದೆ ಸಿಜಿ ವರ್ಕ್ ಆರಂಭವಾಗಲಿದೆ ಎಂದರು.

ಅರ್ಜುನ್ ಜನ್ಯ ಅವರು ಕಥೆ ಹೇಳಿದರು. ಆನಂತರ ಈ ಕಥೆಯನ್ನು ಅನಿಮೇಷನ್‌ ನಲ್ಲಿ ಚಿತ್ರ ಮಾಡಿಕೊಂಡು ಬಂದು ತೋರಿಸುತ್ತೇನೆ ಎಂದರು. ಅನಿಮೇಷನ್‌ ನಲ್ಲಿ ಈ ಚಿತ್ರ ನೋಡಿದಾಗ ತುಂಬಾ ಇಷ್ಟವಾಯಿತು. ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶಕರಾಗಿ ಗೆದ್ದಿದ್ದಾರೆ. ನಿರ್ದೇಶಕರಾಗಿ ಮೊದಲ ಚಿತ್ರ ಹೇಗೆ ಮಾಡುತ್ತಾರೆ? ಎಂದು ಸಾಕಷ್ಟು ಜನ ಕೇಳಿದರು. ನನಗೂ ಆತಂಕ ಇತ್ತು. ಆದರೆ ಚಿತ್ರೀಕರಣ ಶುರುವಾದ ಮೇಲೆ ಅವರು ಪ್ರತಿಯೊಂದು ಸನ್ನಿವೇಶಗಳನ್ನು ನನಗೆ ಕಳುಹಿಸುತ್ತಿದ್ದರು. ಅದನ್ನು ನೋಡಿ ನನಗೆ ತುಂಬಾ ಖುಷಿಯಾಯಿತು. ಇನ್ನೂ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಮೂರು ಜನರು ನನ್ನ ಚಿತ್ರದಲ್ಲಿ ನಟಿಸಿರುವುದು ನನ್ನ ಭಾಗ್ಯ. ಈ ಚಿತ್ರ ಬರೀ ಕರ್ನಾಟಕದಲ್ಲಷ್ಟೇ ಅಲ್ಲ. ಇಡೀ ಭಾರತದಲ್ಲೇ ಹೆಸರು ಮಾಡುವ ನಂಬಿಕೆಯಿದೆ ಎಂದು ನಿರ್ಮಾಪಕ ರಮೇಶ್ ರೆಡ್ಡಿ ತಿಳಿಸಿದರು. ಛಾಯಾಗ್ರಾಹಕ ಸತ್ಯ ಹೆಗಡೆ “45” ಚಿತ್ರದ ಬಗ್ಗೆ ಮಾತನಾಡಿದರು.

TAGGED:45arjun janyaShivraj Kumarupendraಅರ್ಜುನ್ ಜನ್ಯಉಪೇಂದ್ರಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
21 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
22 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
43 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
1 hour ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?