ಕನ್ನಡ ಚಿತ್ರರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ಖ್ಯಾತ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀ ದೇವಮ್ಮ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ, ನಿನ್ನೆ ಮಧ್ಯಾಹ್ನ 12 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಹುಟ್ಟುರಾದ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಯ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಿ ದೇವಮ್ಮ 83ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಇಂದು ಹುಟ್ಟುರಾದ ಜಕ್ಕೇನಹಳ್ಳಿಯಲ್ಲಿ ಶಕ್ತಿ ಪ್ರಸಾದ್ ಸಮಾಧಿಯ ಪಕ್ಕದಲ್ಲೇ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮಿ ದೇವಮ್ಮ ಅವರ ಅಂತ್ಯಕ್ರಿಯೆ ಮಾಡಿದ್ದಾರೆ. ಅರ್ಜುನ್ ಸರ್ಜಾ, ಧ್ರುವಾ ಸರ್ಜಾ ಸೇರಿದಂತೆ ಕುಟುಂಬದ ಹಲವರು ಈ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ:ತಾನೆಂಥ `ಡ್ರಾಮಾ ಕ್ವೀನ್’ ಎಂದು ಹೇಳಿಕೊಂಡ್ರು ಮೋಹಕತಾರೆ ರಮ್ಯಾ: ಕಾರಣವೇನು?




