ಮುಂಬೈ: ಐಪಿಎಲ್ (IPL) ಬಳಿಕ ಕಾಣಿಸಿಕೊಳ್ಳುತ್ತಿರುವ ಯುವ ವೇಗಿ ಅರ್ಜುನ್ ತೆಂಡೂಲ್ಕರ್ (Arjun Tendulkar) ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದಾರೆ.
ಮುಂಬರುವ ದೇವಧರ್ ಟ್ರೋಫಿಗೆ ದಕ್ಷಿಣ ವಲಯಕ್ಕಾಗಿ ಆಡಲಿರುವ ಅರ್ಜುನ್ ತೆಂಡೂಲ್ಕರ್ ಸಿಕ್ಸ್‌ಪ್ಯಾಕ್ (Six Pack) ಫೋಟೋವೊಂದನ್ನ ಹಂಚಿಕೊಂಡಿದ್ದು, ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 31 ರನ್ – ಸಚಿನ್ ತೆಂಡೂಲ್ಕರ್ ಪುತ್ರನ ವಿರುದ್ಧ ಸಿಕ್ಕಾಪಟ್ಟೆ ಟ್ರೋಲ್
Advertisement
Advertisement
ಕಳೆದ ಜೂನ್ ತಿಂಗಳಲ್ಲಿ ನಡೆದ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಗೋವಾ ಪರ ಆಟವಾಡಿದ್ದ ಅರ್ಜುನ್ ತೆಂಡೂಲ್ಕರ್ 20 ದಿನಗಳ ಶಿಬಿರಕ್ಕೆ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಆಗಮಿಸಿದ್ದರು. 130 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಎಡಗೈ ವೇಗಿ ಈಗಾಗಲೇ ರಣಜಿಯಲ್ಲೂ ಶತಕ ಸಿಡಿಸಿ ಮಿಂಚಿದ್ದಾರೆ. ಮುಂಬರುವ ದೇವಧರ್ ಟ್ರೋಫಿಗೆ ದಕ್ಷಿಣ ವಲಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮಯಾಂಕ್ ಅಗರ್ವಾಲ್ ತಂಡವನ್ನ ಮುನ್ನಡೆಸಲಿದ್ದಾರೆ.
Advertisement
Advertisement
2021ರಲ್ಲಿ 20 ಲಕ್ಷಕ್ಕೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಹರಾಜಾಗಿದ್ದ ಅರ್ಜುನ್ ತೆಂಡೂಲ್ಕರ್ 2022ರ ಐಪಿಎಲ್ ಹರಾಜಿನಲ್ಲಿ ಅರ್ಜುನ್ ಮುಂಬೈ ಇಂಡಿಯನ್ಸ್ಗೆ 30 ಲಕ್ಷಕ್ಕೆ ಬಿಕರಿಯಾಗಿದ್ದರು. 2021ರಲ್ಲಿ ಐಪಿಎಲ್‌ಗೂ ಮುನ್ನವೇ ಗಾಯಗೊಂಡಿದ್ದರಿಂದ ಟೂರ್ನಿಯಿಂದಲೇ ಹೊರಬಿದ್ದರು. 2021ರ ಆವೃತ್ತಿಯಲ್ಲಿ ಒಂದು ಪಂದ್ಯವನ್ನೂ ಆಡುವ ಅವಕಾಶ ಸಿಗಲಿಲ್ಲ. 2022ರಲ್ಲೂ ಮುಂಬೈ ಇಂಡಿಯನ್ಸ್ ತಂಡಕ್ಕೆ ಹರಾಜಾದರೂ ಮೈದಾನದಲ್ಲಿ ಆಡುವ ಅವಕಾಶ ಸಿಗಲಿಲ್ಲ.
2023ರ ಆವೃತ್ತಿಯಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕಿತು. ನಾಲ್ಕು ಪಂದ್ಯಗಳಲ್ಲಿ ಮುಂಬೈ ಪರ ಆಡಿದ ಅರ್ಜುನ್ ಮೂರು ವಿಕೆಟ್‌ಗಳನ್ನ ಪಡೆದು 92 ರನ್ ಬಿಟ್ಟುಕೊಟ್ಟರು. ಅದರಲ್ಲೂ ಕಿಂಗ್ಸ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 31 ರನ್ ಬಿಟ್ಟುಕೊಡುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಇದನ್ನೂ ಓದಿ: ತಂದೆಯ ಸಾಧನೆ ಸರಿಗಟ್ಟಿದ ಮಗ – ಮೊದಲ ರಣಜಿ ಪಂದ್ಯದಲ್ಲೇ ಅರ್ಜುನ್ ತೆಂಡೂಲ್ಕರ್ ಶತಕ
Web Stories