ಪಾಟ್ನಾ: ಬಿಹಾರದ ಗಯಾದಲ್ಲಿರುವ ಭಾರತೀಯ ಸೇನಾ ಅಧಿಕಾರಿಗಳ ತರಬೇತಿ ಅಕಾಡೆಮಿಯ ವಿಮಾನವೊಂದು ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್‌ಗಳು ಅಪಾಯದಿಂದ ಪಾರಾಗಿದ್ದಾರೆ.
ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ಯತ್ನಿಸಿದಾಗ ಭೋದಗಯಾ ಬ್ಲಾಕ್‌ಗೆ ಹೊಂದಿಕೊಂಡಿರುವ ಹೊಲದಲ್ಲಿ ಅಪಘಾತ ಸಂಭವಿಸಿದೆ. ಸೇನಾ ವಿಮಾನದಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತರಾಗಿದ್ದಾರೆ ಎಂದು ಗಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಬಂಗಜೀತ್ ಸಾಹಾ ತಿಳಿಸಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್‌ನ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಒಪ್ಪಿಗೆ
Advertisement
Advertisement
ತರಬೇತಿ ಪಡೆಯುತ್ತಿದ್ದ ಪೈಲಟ್‌ಗಳ ವಿಮಾನ ಕೆಳಗೆ ಬೀಳುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಕೆಡೆಟ್‌ಗಳನ್ನು ಹೊರ ತೆಗೆದಿದ್ದಾರೆ. ಕೂಡಲೆ ಸೇನಾ ಸಿಬ್ಬಂದಿ ಅವರನ್ನು ಚಿಕಿತ್ಸೆಗೆ ಕರೆದೊಯ್ದಿದ್ದು, ಅಪಘಾತಕ್ಕೀಡಾದ ವಿಮಾನದ ಅವಶೇಷಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: 500 ರೂಪಾಯಿಗೆ ಖರೀದಿಸಿದ್ದ ಕುರ್ಚಿ 16 ಲಕ್ಷಕ್ಕೆ ಹರಾಜು
Advertisement
ವಿಮಾನ ಅಪಘಾತಕ್ಕೆ ಕಾರಣ ಏನು ಎಂಬುದು ತಾಂತ್ರಿಕ ತಜ್ಞರ ಪರೀಕ್ಷೆಯ ಬಳಿಕವೇ ತಿಳಿಯಲಿದೆ ಎಂದು ಬಂಗಜೀತ್ ತಿಳಿಸಿದ್ದಾರೆ.