ನವದೆಹಲಿ: ಕೃತಕ ಬುದ್ಧಿಮತ್ತೆ (AI) ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ `ಡ್ರೋನ್‌ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ.
Advertisement
ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನಿಶ್ಚಿತಾರ್ಥ ವರನಿಗೆ ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ನೆರೆಮನೆಯವ – ವಧು ಆತ್ಮಹತ್ಯೆ
Advertisement
#KnowYourArmy#SwarmDrones being inducted into the Mechanised Forces, duly embracing the niche & disruptive technologies, will provide an edge to #IndianArmy in meeting future security challenges.#AtmaNirbharBharat #IndianArmy #InStrideWithTheFuture pic.twitter.com/Ly4A9BieAV
— ADG PI – INDIAN ARMY (@adgpi) August 26, 2022
Advertisement
ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ನಿರ್ದಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ. ಯಾವುದೇ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಡ್ರೋನ್‌ಗಳು ಕಾರ್ಯ ನಿಲ್ಲಿಸಿದರೂ, `ಸಮೂಹ’ವು ತನ್ನ ಕಾರ್ಯವನ್ನು ಪೂರ್ಣಗೊಳಿಸಿ ಹಿಂದಿರುಗುತ್ತದೆ’ ಎಂದು ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶನಾಲಯ ಇಂದು ಟ್ವೀಟ್ ಮಾಡಿದೆ.