ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗಡಿ ಜಿಲ್ಲೆ ರಜೌರಿಯಲ್ಲಿ ಬುಧವಾರ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಹುತಾತ್ಮರಾದ ನಾಲ್ವರಲ್ಲಿ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್, ದೆಹಲಿ ಪಬ್ಲಿಕ್ ಸ್ಕೂಲ್, MRPL ನ ಹಳೆಯ ವಿದ್ಯಾರ್ಥಿಯಾಗಿದ್ದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರು, ಸೇನೆಯ ನಡುವೆ ಗುಂಡಿನ ಚಕಮಕಿ – ಮೂವರು ಸೇನಾ ಸಿಬ್ಬಂದಿ ಹುತಾತ್ಮ
Advertisement
Advertisement
ಭಯೋತ್ಪಾದಕರ ಬಗ್ಗೆ ನಿರ್ದಿಷ್ಟ ಮಾಹಿತಿ ಆಧರಿಸಿ ನವೆಂಬರ್ 19 ರಂದು ಕಲಾಕೋಟೆ ಪ್ರದೇಶದ ಗುಲಾಬ್ಗಢ ಅರಣ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ನವೆಂಬರ್ 22 ರಂದು ಎನ್‌ಕೌಂಟರ್ ನಡೆದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Advertisement
Advertisement
ಶೋಧನಾ ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಆಸ್ಪತ್ರೆ ದಾಖಲಿಸಲಾಯಿತಾದರೂ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೈನಿಕರ ಸಾವು-ನೋವುಗಳ ನಿಖರ ಸಂಖ್ಯೆಯನ್ನು ಸೇನೆಯು ದೃಢಪಡಿಸಿಲ್ಲ. ಇದನ್ನೂ ಓದಿ: ಸ್ಕೇಟಿಂಗ್ ಮಾಡುತ್ತಿದ್ದಾಗ ವಾಹನ ಡಿಕ್ಕಿ – ಹಿರಿಯ ಪೊಲೀಸ್ ಅಧಿಕಾರಿಯ 10 ವರ್ಷದ ಪುತ್ರ ಸಾವು