ಶ್ರೀನಗರ: ಬಾಲಕಿಯೊಬ್ಬಳನ್ನು ಹೋಟೆಲ್‍ಗೆ ಕರೆದೊಯ್ದಿದ್ದ ಪ್ರಕರಣದ ಆರೋಪ ಸಾಬೀತಾದರೆ ಮೇಜರ್ ಗೊಗೊಯ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿದ್ದಾರೆ.
ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತೀಯ ಸೇನೆಯಲ್ಲಿರು ಯಾರೇ ತಪ್ಪು ಮಾಡಿದರೂ ಅವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ. ಶಿಕ್ಷೆಯು ಇತರರಿಗೆ ಮಾದರಿಯಾಗುವ ರೀತಿ ಇರುತ್ತದೆ ಎಂದು ಅವರು ಹೇಳಿದ್ದಾರೆ.
Advertisement
If anyone in Indian Army, at any rank, does any wrong & it comes to our notice then strictest action will be taken. If Major Gogoi has done something wrong then I can say that he will be given due punishment & the punishment will be such that it will set an example: Army Chief pic.twitter.com/vO2hdeqilx
— ANI (@ANI) May 25, 2018
Advertisement
ಏನಿದು ಪ್ರಕರಣ?
ಮೇ 23ರಂದು ಭಾರತೀಯ ಸೇನೆಯ ಆರೋಪಿ ಮೇಜರ್ ಲೀತುಲ್ ಗೊಗೊಯ್ ಶ್ರೀನಗರದ ಹೋಟೆಲ್‍ವೊಂದರಲ್ಲಿ ರೂಮ್ ಬುಕ್ ಮಾಡಿದ್ದರು. ಅಲ್ಲಿಗೆ 17 ವರ್ಷದ ಸ್ಥಳೀಯ ಬಾಲಕಿಯನ್ನು ರೂಮ್‍ಗೆ ಕರೆತಂದಿದ್ದರು.
Advertisement
ಸ್ಥಳೀಯರಿಗೆ ರೂಮ್ ನೀಡುವುದಿಲ್ಲ ಎನ್ನುವುದು ಹೋಟೆಲ್ ನಿಯಮವಾಗಿತ್ತು. ಹೀಗಾಗಿ ಬಾಲಕಿ ಹೋಟೆಲ್ ಪ್ರವೇಶಿಸಿದ್ದನ್ನು ಸಿಬ್ಬಂದಿ ವಿರೋಧಿಸಿದ್ದಾರೆ. ಅಲ್ಲಿಂದ ಹೊರಬಂದು ಸಿಬ್ಬಂದಿಯೊಂದಿಗೆ ಗೊಗೊಯ್ ವಾಗ್ವಾದಕ್ಕಿಳಿದಿದ್ದರು. ಈ ವೇಳೆ ಗೊಗೊಯ್ ಪರಿಚಿತ ವ್ಯಕ್ತಿ ಸಮೀರ್ ಅಹ್ಮದ್ ಇಲ್ಲಿದ್ದ ಎನ್ನಲಾಗಿದೆ. ಹೋಟೆಲ್ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಗೊಗೊಯ್‍ನನ್ನು ಬಂಧಿಸಿದ್ದಾರೆ. ಇದನ್ನು ಓದಿ:
Advertisement
ಲೀತುಲ್ ಗೊಗೊಯ್ ಯಾರು?
ಅಸ್ಸಾಂನ ಗುವಾಹಟಿಯವರಾದ ಲೀತುಲ್ ಗೊಗೊಯ್ ಯುಪಿಎಸ್‍ಸಿ ಎನ್‍ಡಿಎ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಪಾಸ್ ಮಾಡಿದ್ದಾರೆ. ಡೆಹ್ರಾಡೂನ್ ನಲ್ಲಿರುವ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದು 2013ರಲ್ಲಿ ಅಧಿಕಾರಿಯಾಗಿ ಗೊಗೊಯ್ ಸೇನೆಗೆ ಸೇರ್ಪಡೆಯಾಗಿದ್ದಾರೆ.
ಏಪ್ರಿಲ್ 9ರಂದು ಕಾಶ್ಮೀರದಲ್ಲಿ ಸೈನಿಕರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯನ್ನು ತಡೆಯುವ ಸಲುವಾಗಿ ಕಲ್ಲು ತೂರಾಟ ನಡೆಸುವವರನ್ನೇ ಭಾರತೀಯ ಸೈನಿಕರು ಜೀಪ್ ಗೆ ಬಿಗಿದು ಚಾಲನೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಕುರಿತು ಸೇನೆ ತನಿಖೆಗೆ ಆದೇಶಿಸಿತ್ತು. ಯುವಕನನ್ನು ಜೀಪ್ ಗೆ ಕಟ್ಟಿ ಮೆರವಣಿಗೆ ಮಾಡಿದ್ದ ಗೊಗೊಯ್ ಅವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಲೀತುಲ್ ಗೊಗೊಯ್ ಅವರ ಈ ಕಾರ್ಯವನ್ನು ಮೆಚ್ಚಿ ಸೇನೆಯ ಜನರಲ್ ಬಿಪಿನ್ ರಾವತ್ ಪ್ರಶಸ್ತಿ ಪತ್ರ ಕೊಟ್ಟು ಸನ್ಮಾನಿಸಿದ್ದರು. ಮೇಜರ್ ಗೆ ಸನ್ಮಾನ ಮಾಡಿದ್ದಕ್ಕೆ ಪಾಕ್ ಮಾಧ್ಯಮಗಳು ಇದನ್ನು ಶೇಮ್‍ಫುಲ್ ಅವಾರ್ಡ್ ಎಂದು ಟೀಕೆ ಮಾಡಿತ್ತು.