ಶ್ರೀನಗರ: ಉತ್ತರ ಕಾಶ್ಮೀರದ ಬಂಡೀಪೊರಾದಲ್ಲಿ ಸೇನಾ ಚೀತಾ ಹೆಲಿಕಾಪ್ಟರ್ ಪತನವಾಗಿದೆ. ಹೆಲಿಕಾಪ್ಟರ್‌ನಲ್ಲಿ ಸಂಚರಿಸುತ್ತಿದ್ದ ಪೈಲಟ್ ಹಾಗೂ ಸಹ ಪೈಲಟ್ ಅನ್ನು ರಕ್ಷಿಸಲಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ಚೀತಾ ಹೆಲಿಕಾಪ್ಟರ್ ಗುರೆಜ್ ಕಣಿವೆಯ ಗುಜ್ರಾನ್ ನಲ್ಲಾ ಪ್ರದೇಶದಲ್ಲಿ ಪತನಗೊಂಡಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಹೃದಯ ಸಂಬಂಧಿ ಸಮಸ್ಯೆಯಿಂದ ತೆಲಂಗಾಣ ಸಿಎಂ ಆಸ್ಪತ್ರೆಗೆ ದಾಖಲು
ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್ ಹಾಗೂ ಸಹ ಪೈಲಟ್ ಇಬ್ಬರನ್ನೂ ಘಟನಾ ಸ್ಥಳದಿಂದ ರಕ್ಷಿಸಲಾಗಿದೆ. ಆದರೆ ಅವರ ಸ್ಥಿತಿ ಚಿಂತಾಜನಕವಾಗಿದ್ದು, 92 ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತನ್ನದೇ ದಾಖಲೆ ಮುರಿದು ಗಿನ್ನಿಸ್ ದಾಖಲೆ ಬರೆದ ಲಿಮೋಸಿನ್ ಕಾರು