ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ (Army Helicopter) ಒಂದು ಪತನವಾಗಿರುವ ಆಘಾತಕಾರಿ ಘಟನೆ ಗುರುವಾರ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಚ್ನಾ ಗ್ರಾಮದ ಬಳಿ ಸೇನೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ. ಅಪಘಾತದ ವೇಳೆ ಹೆಲಿಕಾಪ್ಟರ್‌ನಲ್ಲಿ ಮೂರು ಮಂದಿ ಇದ್ದರು ಎನ್ನಲಾಗಿದೆ. ಇದನ್ನೂ ಓದಿ: ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ
ಹೆಲಿಕಾಪ್ಟರ್ ಪತನದಿಂದಾಗಿ ಪೈಲಟ್‌ಗಳು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಸುರಕ್ಷಿತರಾಗಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 2 ತಿಂಗಳಲ್ಲಿ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಅಪಘಾತವಾಗಿರುವ 3ನೇ ಘಟನೆ ಇದಾಗಿದೆ. ಇದನ್ನೂ ಓದಿ: ಅಗತ್ಯವಿದ್ದರೆ ರಾಜ್ಯದಲ್ಲೂ ಬಜರಂಗದಳ ನಿಷೇಧ ಮಾಡ್ತೀವಿ – ಛತ್ತೀಸಗಢ ಸಿಎಂ