ಶ್ರೀನಗರ: ಪುಲ್ವಾಮಾ ದಾಳಿ ನಡೆದು 40 ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಉಗ್ರರು ಹುದುಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಸೇನೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ನೆಲದ ಒಳಗಡೆ ಹುದುಗಿಸಿಟ್ಟಿದ್ದ ಐಇಡಿ ಸ್ಫೋಟಗೊಂಡು ಮೇಜರ್ ಹುತಾತ್ಮರಾಗಿದ್ದರೆ, ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಡಿ ನಿಯಂತ್ರಣ ರೇಖೆಯ ಬಳಿಯಿಂದ 1.5 ಕಿ.ಮೀ ದೂರದಲ್ಲಿ ಐಇಡಿಯನ್ನು ಇಡಲಾಗಿತ್ತು.
Advertisement
ಶನಿವಾರ ಸಂಜೆ 3 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಗಡಿ ನಿಯಂತ್ರಣ ರೇಖೆಯ ಬಳಿ ಸೇನೆಯ ಅಧಿಕಾರಿಗಳು ಗಸ್ತು ತಿರುಗುವ ವೇಳೆ ಮಣ್ಣಿನಲ್ಲಿ ಹೂತ್ತಿದ್ದ ವಸ್ತು ಪತ್ತೆಯಾಗಿದೆ. ಈ ವಸ್ತುವನ್ನು ಮಣ್ಣಿನಿಂದ ತೆಗೆಯುವಾಗ ಸ್ಫೋಟಗೊಂಡಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv