ತಿರುವನಂತಪುರಂ: ಸೇನಾ ಸಿಬ್ಬಂದಿಯೊಬ್ಬರ (Army Personnel) ಕೈಗಳನ್ನು ಹಿಂದಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿ ಬಳಿಕ ಬೆನ್ನಿನಲ್ಲಿ ಪಿಎಫ್ಐ (PFI) ಎಂದು ಕಿಡಿಗೇಡಿಗಳು ಬರೆದ ಘಟನೆಯೊಂದು ಕೇರಳದಲ್ಲಿ (Kerala) ಬೆಳಕಿಗೆ ಬಂದಿದೆ.
ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಸೇನಾ ಸಿಬ್ಬಂದಿಯು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
- Advertisement 2
- Advertisement 3
ಹಲ್ಲೆಗೊಳಗಾದ ಸೇನಾ ಸಿಬ್ಬಂದಿಯನ್ನು ಶೈನ್ ಕುಮಾರ್ ಎಂದು ಗುರುತಿಸಲಾಗಿದೆ. ಇವರ ನಿವಾಸ ಕಡಕ್ಕಲ್ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ. ಟೇಪ್ನಿಂದ ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ, ಥಳಿಸಿ ಬಳಿಕ ಬೆನ್ನಲ್ಲಿ ಹಸಿರು ಬಣ್ಣ ಪೈಂಟ್ನಲ್ಲಿ ಪಿಎಫ್ಐ ಎಂದು ಬರೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್ಚಿನ ಹಣ ಕೊಡಲು ನಿರಾಕರಿಸಿದ ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು
- Advertisement 4
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನಿಷೇಧಿತ ಪಿಎಫ್ಐ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕೇರಳದ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ದಿನ ಈ ಘಟನೆ ವರದಿಯಾಗಿದೆ. ಎರ್ನಾಕುಲಂ, ಮಲಪ್ಪುರಂ, ವಯನಾಡ್ ಮತ್ತು ತ್ರಿಶೂರ್ ಸೇರಿದಂತೆ ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ. ಸೋಮವಾರ ಬೆಳಗ್ಗೆ ಆರಂಭವಾದ ದಾಳಿಗಳು ಸಿಆರ್ಪಿಎಫ್ ಮತ್ತು ಕೇರಳ ಪೊಲೀಸ್ ಸಿಬ್ಬಂದಿಯ ನೆರವಿನೊಂದಿಗೆ ಮುಂದುವರಿದಿದೆ.
Web Stories