ಶ್ರೀನಗರ: ಭದ್ರತಾ ಪಡೆಯು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಮುಂದಾಗುತ್ತಿದ್ದ ಇಬ್ಬರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಿದೆ.
OP TIKKA, Baramulla
On 23 Apr 2025, approximately 2-3 UI terrorists tried to infiltrate through general area Sarjeevan at Uri Nala, Baramulla, the alert tps on LC challenged and intercepted them resulting in a firefight.
Operation is in progress.#Kashmir@adgpi… pic.twitter.com/FOTXiTNYSf
— Chinar Corps🍁 – Indian Army (@ChinarcorpsIA) April 23, 2025
ಈ ಇಬ್ಬರು ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್ ಮೈಂಡ್!
ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ತಡೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಸತತ 1 ಗಂಟೆಯ ಕಾರ್ಯಾಚರಣೆ ನಂತರ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಯಿತು. ಈ ವೇಳೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: Pahalgam Terror Attack | ಹಿಂದೂಗಳೇ ಭಯೋತ್ಪಾದಕರ ಟಾರ್ಗೆಟ್!
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು (Pahalgam Terror Attack) ಪ್ರವಾಸಿಗರ ಮೇಲೆ ದಾಳಿ ನಡೆಸಿದ ಒಂದು ಘಟನೆಯ ನಂತರ ಈ ಕಾರ್ಯಾಚರಣೆ ನಡೆದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿಯಲಿ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನೌಕಾಪಡೆಯ ಒಬ್ಬ ಅಧಿಕಾರಿ ಹಾಗೂ ಗುಪ್ತಚರ ಬ್ಯೂರೋದ ಅಧಿಕಾರಿಯೊಬ್ಬರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್ ಬಲಿ
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಪ್ರಧಾನಿ ಮೋದಿಯವರು (Narendra Modi) ಖಂಡಿಸಿದ್ದಾರೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡಲಾಗುವುದಿಲ್ಲ. ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು
ಸೌದಿ ಅರೇಬಿಯಾದ ತಮ್ಮ ಪ್ರವಾಸವನ್ನು ಅರ್ಧಕ್ಕೆ ಕೈಬಿಟ್ಟು ಬುಧವಾರ ಬೆಳಗ್ಗೆ ಭಾರತಕ್ಕೆ ಹಿಂತಿರುಗಿದರು. ಬಳಿಕ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು.