ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು (Soldiers) ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.
ಇಂದು (ಗುರುವಾರ) ಮಧ್ಯಾಹ್ನ 3:45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಹಾದು ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುಹಾಕಿ ದಾಳಿ ನಡೆಸಿದರು. ಈ ವೇಳೆ ಎನ್‌ಕೌಂಟರ್ ನಡೆಸಲಾಗಿತ್ತು. ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ
Advertisement
Advertisement
ಸೇನೆಯು ಬುಧವಾರ ರಾತ್ರಿಯಿಂದ ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಉಗ್ರರ ವಿರುದ್ಧ ಎನ್‌ಕೌಂಟರ್ ಮುಂದುವರಿದಿದೆ.
Advertisement
ಕಳೆದ ರಾತ್ರಿ ಡಿಕೆಜಿಯ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಇಂದು ಸಂಜೆ ಸಂಪರ್ಕವನ್ನು ಸ್ಥಾಪಿಸಲಾಗಿದೆ. ಎನ್‌ಕೌಂಟರ್ ಪ್ರಗತಿಯಲ್ಲಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ ಸುರೇಶ್
Advertisement
ಕಳೆದ ತಿಂಗಳು, ರಾಜೌರಿಯ ಕಲಾಕೋಟೆಯಲ್ಲಿ ಸೇನೆ ಮತ್ತು ಅದರ ವಿಶೇಷ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೈನಿಕರು ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದರು.
ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದೆ. ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಪ್ರಮುಖ ದಾಳಿಯ ತಾಣವಾಗಿದೆ. ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜೌರಿ-ಪೂಂಚ್ ಪ್ರದೇಶದಲ್ಲಿನ ಅವಳಿ ದಾಳಿಯಲ್ಲಿ 10 ಯೋಧರು ಹುತಾತ್ಮರಾಗಿದ್ದರು. ಈ ಪ್ರದೇಶವು 2003 ಮತ್ತು 2021 ರ ನಡುವೆ ಭಯೋತ್ಪಾದನೆಯಿಂದ ಮುಕ್ತವಾಗಿತ್ತು. ನಂತರ ಆಗಾಗ್ಗೆ ಎನ್‌ಕೌಂಟರ್‌ಗಳು ನಡೆಯುತ್ತಿದ್ದವು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?
ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.