ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu&Kashmir) ರಾಜೌರಿಯ (Rajouri) ಸುಂದರ್‌ಬನಿ ಮಲ್ಲಾ ರಸ್ತೆಯ ಅರಣ್ಯ ಪ್ರದೇಶದ ಫಾಲ್ (Phal) ಗ್ರಾಮದ ಬಳಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ವರದಿಗಳ ಪ್ರಕಾರ ಸೇನಾ ವಾಹನವು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ಮಾಡಲಾಗಿದೆ. ಯಾವುದೇ ಸಾವುನೋವು ಸಂಭವಿಸಿಲ್ಲ, ಸೈನಿಕರು ಗಾಯಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಮಿಳುನಾಡಿಗೆ ಅಮಿತ್ ಶಾ ಭೇಟಿ – ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಅಮಿತ್ ಶಾ
Advertisement
Advertisement
ಕಾಡಿನಲ್ಲಿ ಅವಿತುಕೊಂಡಿದ್ದ ಭಯೋತ್ಪಾದಕರು, ಸೇನಾ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ. ಈ ಮಾರ್ಗವನ್ನು ಉಗ್ರರ ಒಳನುಸುಳುವಿಕೆ ಮಾರ್ಗವೆಂದು ವರದಿಯಾಗಿದೆ.
Advertisement
ಸೇನೆಯು ಭಯೋತ್ಪಾದಕರ ಮೇಲೆ ಪ್ರತಿದಾಳಿ ನಡೆಸಿದೆ. ದಾಳಿ ನಡೆದ ಸ್ಥಳದಲ್ಲಿ ಸೇನೆಯು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಕ್ತಿ ಪ್ರಿಯ ಶಿವ.. ಪರಮೇಶ್ವರನ ಅಚ್ಚುಮೆಚ್ಚಿನ ಭಕ್ತರಿವರು
Advertisement
ಪಂಜಾಬ್‌ನ ಪಠಾಣ್‌ಕೋಟ್‌ನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಬಿಎಸ್‌ಎಫ್ ಸಿಬ್ಬಂದಿ ಪಾಕಿಸ್ತಾನಿ ಒಳನುಸುಳುಕೋರನನ್ನು ಹತ್ಯೆ ಮಾಡಿದ್ದಾರೆ. ಪಠಾಣ್‌ಕೋಟ್ ಮೂಲಕ ವ್ಯಕ್ತಿಯೊಬ್ಬ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ. ಆರಂಭದಲ್ಲಿ ಬಿಎಸ್‌ಎಫ್ ಸಿಬ್ಬಂದಿ ಆತನಿಗೆ ಎಚ್ಚರಿಕೆ ನೀಡಿದ್ದರು. ಇದನ್ನು ನಿರ್ಲಕ್ಷಿಸಿ ಮುಂದೆ ಸಾಗುತ್ತಲೇ ಇದ್ದ ನುಸುಳುಕೋರರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.