ನವದೆಹಲಿ: ಭಾರತೀಯ ಸೇನೆ ಗಡಿ ದಾಟಿ ಯುದ್ಧ ಮಾಡಲು ಸಿದ್ಧವಿದೆ ಎಂದು ಜನರಲ್ ಬಿಪಿನ್ ರಾವತ್ ಸರ್ಕಾರಕ್ಕೆ ತಿಳಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.
2019ರ ಪುಲ್ವಾಮಾ ದಾಳಿ ಬಳಿಕ ಸರ್ಕಾರ ಪ್ರತೀಕಾರ ತೀರಿಸಲು ಮೂರು ವಿಭಾಗಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿತ್ತು. ಈ ಸಂದರ್ಭದಲ್ಲಿ ಬಿಪಿನ್ ರಾವತ್ ಭೂಸೇನೆ ಯಾವುದೇ ಕಾರ್ಯಾಚರಣೆಗೆ ಸಿದ್ಧವಾಗಿದೆ. ಅಗತ್ಯ ಬಿದ್ದರೆ ಗಡಿ ದಾಟಿ ಹೋರಾಟ ಮಾಡಲು ನಾವು ಪೂರ್ಣವಾಗಿ ತಯಾರಿದ್ದೇವೆ ಎಂಬುದಾಗಿ ಭರವಸೆ ನೀಡಿದ್ದ ವಿಚಾರವನ್ನು ಸೇನೆಯ ಇಬ್ಬರು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಪುಲ್ವಾಮಾ ದಾಳಿಯ ಬಳಿಕ ಯಾವ ರೀತಿ ಸಿದ್ಧಗೊಂಡಿದೆ ಎಂದು ಸರ್ಕಾರ ಸೇನೆಯನ್ನು ಕೇಳಿತ್ತು. ಈ ಪ್ರಶ್ನೆಗೆ ಬಿಪಿನ್ ರಾವತ್, 2016ರ ಉರಿ ಮೇಲಿನ ದಾಳಿಯ ಬಳಿ ಬಳಿಕ ಸಾಕಷ್ಟು ಮದ್ದುಗುಂಡುಗಳ ಸಂಗ್ರಹವನ್ನು ಮಾಡಿಕೊಂಡಿದ್ದೇವೆ. ಹೀಗಾಗಿ ಗಡಿಯನ್ನು ದಾಟಿಯೂ ಹೋರಾಟ ನಡೆಸಲು ಸೇನೆ ಪೂರ್ಣವಾಗಿ ತಯಾರಾಗಿದೆ ಎಂದು ಉತ್ತರಿಸಿದ್ದರು.
Advertisement
Advertisement
ಸೋಮವಾರ ದೆಹಲಿಯನ್ನು ನಡೆದ ಸೇನೆಯ ನಿವೃತ್ತ ಅಧಿಕಾರಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ ರಾವತ್, ಬಾಲಾಕೋಟ್ ಮೇಲಿನ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನ ಯಾವುದೇ ದಾಳಿಯನ್ನು ಎದುರಿಸಲು ಸೇನೆ ಸಂಪೂರ್ಣ ಸಜ್ಜಾಗಿತ್ತು ಎಂದು ತಿಳಿಸಿದ್ದರು.
Advertisement
ಫೆ.14 ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರ ತೀರಿಸಲು ಸರ್ಕಾರ ಮೂರು ಸೇನೆಯ ಮುಖ್ಯಸ್ಥರ ಜೊತೆ ಸರಣಿ ಸಭೆ ನಡೆಸಿತ್ತು. ಅಂತಿಮವಾಗಿ ಏರ್ ಸ್ಟ್ರೈಕ್ ನಡೆಸಲು ಒಪ್ಪಿಗೆ ನೀಡಿತ್ತು. ನಿಗದಿಯಂತೆ ಫೆ.26 ರಂದು ವಾಯುಸೇನೆ ಬಾಲಕೋಟ್, ಚಕೋಟಿ, ಮುಜಾಫರಾಬಾದ್ ಮೇಲೆ ಏರ್ ಸ್ಟ್ರೈಕ್ ನಡೆಸಿತ್ತು. ಬಾಲಕೋಟ್ ಮೇಲಿನ ಬಾಂಬ್ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದರು ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿತ್ತು.