ಕೊಚ್ಚಿಹೋದ ಸೇತುವೆಗಳಿಗೆ ಕೆಲವೇ ನಿಮಿಷಗಳಲ್ಲಿ ತಾತ್ಕಾಲಿಕ ಮರದ ಸೇತುವೆ ನಿರ್ಮಾಣ – ಯೋಧರ ಕಾರ್ಯಕ್ಕೆ ಶ್ಲಾಘನೆ

Public TV
1 Min Read
KERALA 1

ತಿರುವನಂತಪುರಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ದೇವರ ನಾಡು ಕೇರಳದಲ್ಲಿ ಭಾರತೀಯ ಯೋಧರು ಹಾಗೂ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯವನ್ನು ಮುಂದುವರಿಸಿದ್ದು, ಸದ್ಯ ಹಲವು ಪ್ರದೇಶಗಳಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಸೇತುವೆಗಳಿಗೆ ತಾತ್ಕಾಲಿಕ ಮರದ ಸೇತುವೆಗಳನ್ನು ನಿರ್ಮಾಣ ಮಾಡಿದ್ದಾರೆ.

ಯೋಧರು ನಿರ್ಮಾಣ ಮಾಡಿರುವ ಹಲವು ತಾತ್ಕಾಲಿಕ ಸೇತುವೆಗಳ ಫೋಟೋಗಳನ್ನ ಎಡಿಜಿ ಪಿಐ-ಇಂಡಿಯನ್ ಆರ್ಮಿ ತನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಯೋಧರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೇರಳ ರಕ್ಷಣಾ ಕಾರ್ಯಾಚರಣೆಗೆ ಅಪರೇಷನ್ ಸಹಯೋಗ್ ಎಂದು ಹೆಸರಿಡಲಾಗಿದೆ. ಇದರಲ್ಲಿ ಭಾರತೀಯ ವಾಯುಪಡೆ, ನೌಕಾಪಡೆ ಹಾಗೂ ಕರಾವಳಿ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ಸ್ಥಳೀಯ ಸಂಪನ್ಮೂಲಗಳನ್ನೇ ಬಳಕೆ ಮಾಡಿಕೊಳ್ಳುತ್ತಿರುವ ಯೋಧರು, ಉರುಳಿಬಿದ್ದ ಬೃಹತ್ ಮರಗಳನ್ನು ಬಳಕೆ ಮಾಡಿಕೊಂಡು ಸೇತುವೆ ನಿರ್ಮಾಣ ಮಾಡಿ ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಇದನ್ನೂ ಓದಿ: ಕೇರಳ ನಿರಾಶ್ರಿತರಿಗೆ ಹೊದಿಕೆ ಕೊಟ್ಟು ಹೀರೋ ಆದ ಮಧ್ಯಪ್ರದೇಶದ ಬಡವ್ಯಾಪಾರಿ

ಕೇರಳ ಪ್ರವಾಹಕ್ಕೆ ದೇಶದ ಹಲವು ಭಾಗಗಳಿಂದ ನೆರವಿನ ಸಹಾಯ ನೀಡಲಾಗಿದ್ದು, ಸಿನಿಮಾ ಸ್ಟಾರ್ ಗಳು ಸೇರಿದಂತೆ ಸಾಮಾನ್ಯ ಜನರು ಸಹ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಕ್ಯಾಂಪ್‍ಗಳನ್ನು ನಿರ್ಮಾಣ ಮಾಡಿ ಆಹಾರ ಹಾಗೂ ವಸತಿ ನೀಡಲಾಗುತ್ತಿದೆ. ಅಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದ ಹಲವರಿಗೆ ವೈದ್ಯಕೀಯ ಸೇವೆ ನೀಡುವ ಕಾರ್ಯವೂ ನಡೆಯುತ್ತಿದೆ.

ಭಾರತೀಯ ಸೈನ್ಯದ ಕರ್ನಾಟಕ ಹಾಗೂ ಕೇರಳ ಭಾಗದ ತುಕಡಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದೆ. ಇದರಲ್ಲಿ ಪ್ರಮುಖವಾಗಿ ಬೆಂಗಳೂರಿನ ಮಿಲಿಟರಿ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ನ ಎರಡು ಪಡೆಗಳು ಸಹ ಭಾಗವಹಿಸಿದೆ. ಕಳೆದ ಎರಡು ದಿನಗಳ ಹಿಂದೆ ಎನ್‌ಡಿಆರ್‌ಎಫ್ ಯೋಧ ಕನ್ಹಾಯ್ ಕುಮಾರ್ ತಮ್ಮ ಜೀವವನ್ನು ಲೆಕ್ಕಿಸದೆ ಮಗುವನ್ನು ರಕ್ಷಣೆ ಮಾಡಿ ಹೀರೋ ಆಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಇದನ್ನೂ ಓದಿ: ಪ್ರಾಣವನ್ನು ಲೆಕ್ಕಿಸದೇ ಮಗುವನ್ನು ರಕ್ಷಿಸೋದೇ ಗುರಿಯಾಗಿತ್ತು: ಎನ್‍ಡಿಆರ್‌ಎಫ್ ಸಿಬ್ಬಂದಿ 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *