ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ.. ಭಕ್ತರಿಗೆ ಈಗಲೇ ಪ್ರವೇಶವಿಲ್ಲ: ವಕೀಲ ಸೋಹನ್‌ ಲಾಲ್‌ ಆರ್ಯ

Public TV
1 Min Read
sohan lal arya

ಉತ್ತರ ಪ್ರದೇಶ: ಜ್ಞಾನವಾಪಿ ಮಸೀದಿ (Gyanvapi Mosque) ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಹಿಂದೂ ಅರ್ಚಕರಿಗೆ ಅವಕಾಶ ಕಲ್ಪಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ (Varanasi Court) ಆದೇಶ ಹೊರಡಿಸಿದೆ. ಮಸೀದಿ ನೆಲಮಾಳಿಗೆಯಲ್ಲಿ ವಿಗ್ರಹಗಳಿಗೆ ಪೂಜೆ ಕೂಡ ಮಾಡಲಾಗಿದೆ. ಆದರೆ ಭಕ್ತರ ಪ್ರವೇಶಕ್ಕೆ ಯಾವುದೇ ಅವಕಾಶ ಇಲ್ಲ ಎಂದು ವಕೀಲ ಸೋಹನ್‌ ಲಾಲ್‌ ಆರ್ಯ (Sohan Lal Arya) ತಿಳಿಸಿದ್ದಾರೆ.

ಇಂದು ನಾವು ತುಂಬಾ ಹೆಮ್ಮೆಪಡುತ್ತೇವೆ. ನಿನ್ನೆ ನ್ಯಾಯಾಲಯದ ತೀರ್ಪು ಅಭೂತಪೂರ್ವವಾಗಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿತ್ತು. ಮಧ್ಯಾಹ್ನದ ವೇಳೆಗೆ ಪೂಜೆ ಕೂಡ ಆಗಿದೆ. ಆದರೆ ಅದನ್ನು ಭಕ್ತರಿಗೆ ಇನ್ನೂ ತೆರೆಯಲಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ 31 ವರ್ಷದ ಬಳಿಕ ವಿಗ್ರಹಗಳಿಗೆ ಪೂಜೆ

Gyanvapi pooja

ವಕೀಲ ಧೀರೇಂದ್ರ ಪ್ರತಾಪ್ ಸಿಂಗ್, ಭಕ್ತ ಧೀರೇಂದ್ರ ಪ್ರತಾಪ್ ಸಿಂಗ್, ನ್ಯಾಯಾಲಯದ ಆದೇಶದಿಂದ ನಮಗೆ ಅತ್ಯಂತ ಸಂತೋಷವಾಗಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.

ನಾವೆಲ್ಲರೂ ಪ್ರತಿದಿನ ಮುಂಜಾನೆ 3 ಗಂಟೆಗೆ ದರ್ಶನಕ್ಕಾಗಿ ಇಲ್ಲಿಗೆ ಬರುತ್ತೇವೆ. ನ್ಯಾಯಾಲಯದ ಆದೇಶದಿಂದ ನಾವು ಅತ್ಯಂತ ಸಂತೋಷ ಮತ್ತು ಭಾವುಕರಾಗಿದ್ದೇವೆ. ದೇವರ ‘ದರ್ಶನ’ ಭಾಗ್ಯ ಸಿಕ್ಕಿದ್ದಕ್ಕೆ ನಮ್ಮ ಸಂತೋಷಕ್ಕೆ ಮಿತಿಯಿಲ್ಲ. ಆದಷ್ಟು ಬೇಗ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ಹಿಂದೂ ಅರ್ಚಕರಿಗೆ ವಾರಣಾಸಿಯ ಜಿಲ್ಲಾ ಕೋರ್ಟ್‌ ಬುಧವಾರ ಅವಕಾಶ ಕಲ್ಪಿಸಿತ್ತು. ಇದಕ್ಕಾಗಿ ವಾರದಲ್ಲಿ ಅಗತ್ಯ ವ್ಯವಸ್ಥೆಯನ್ನು ಒದಗಿಸಬೇಕು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವರಿಗೆ ಕೋರ್ಟ್‌ ಆದೇಶಿಸಿತ್ತು.

Share This Article