ಬೆಂಗಳೂರು: ಟ್ರಾಫಿಕ್ ಸಿಗ್ನಲ್‍ಗಳಲ್ಲಿನ ಬ್ಯಾಟರಿ ಕಳವು ಮಾಡುತ್ತಿದ್ದ ಕುಖ್ಯಾತ ದಂಪತಿಯನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಸಿಕಂದರ್, ನಜ್ಮಾ ಬಂಧಿತ ಕಳ್ಳ ದಂಪತಿ. ಆರೋಪಿಗಳು ಟ್ರಾಫಿಕ್ ಸಿಗ್ನಲ್‍ಗಳಲ್ಲಿನ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದರು. ಕಳವು ಮಾಡುತ್ತಿದ್ದ ಬ್ಯಾಟರಿಗಳನ್ನು ಧನಶೇಖರ್ ಎಂಬಾತನಿಗೆ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 69 ಕಳವು ಪ್ರಕರಣ ಬೆಳಕಿಗೆ ಬಂದಿದ್ದು, 20 ಲಕ್ಷ ಮೌಲ್ಯದ 169 ಬ್ಯಾಟರಿ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅಕ್ರಮವಾಗಿ ಎಮ್ಮೆ, ಹಸುಗಳನ್ನ ಸಾಗಿಸುತ್ತಿದ್ದ ವಾಹನ ಲಾಕ್!
ಕಳವು ಮಾಡಿದ ಬ್ಯಾಟರಿಗಳನ್ನು ಖರೀದಿ ಮಾಡಿದ ಆರೋಪದಲ್ಲಿ ಧನಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ತರಕಾರಿ ಮಾರಾಟ ನೆಪದಲ್ಲಿ ಬಂದು ಕಳವು ಮಾಡುತ್ತಿದ್ದರು. ಒಂದೊಂದು ದಿನ ಒಂದೊಂದು ಡಿವಿಜನ್‍ನಲ್ಲಿ ಕಳವು ಮಾಡುತ್ತಿದ್ದರು. ಪೊಲೀಸರಿಗೆ ಜೆ.ಪಿ.ನಗರ ಬಳಿ ಸಿಕ್ಕ ಸಿಸಿಟಿವಿ ಆಧಾರದ ಮೇಲೆ ಶೋಧ ಕಾರ್ಯ ನಡೆಸಿದ್ದರು. ಕೊನೆಗೆ ಗೊರಗುಂಟೆಪಾಳ್ಯದ ಪೆಟ್ರೋಲ್ ಬಂಕ್ ಬಳಿ ಬೈಕ್‍ಗೆ ನಂಬರ್ ಪ್ಲೇಟ್ ಇಲ್ಲದೆ ಸಂಚಾರ ಮಾಡುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಗಿದೆ.