ನೆಲಮಂಗಲ: ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ರಿಯಾಜ್ ಮತ್ತು ಸಯ್ಯದ್ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 3 ಕೆಜಿ ಗಾಂಜಾ ವಶ ಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
Advertisement
Advertisement
ತಮ್ಮೇನಹಳ್ಳಿ ಬಳಿ ಆಚಾರ್ಯ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಪೊಲೀಸರು ಪ್ರಾಮಾಣಿಕರಾಗಿಲ್ಲದಿದ್ದರೆ, ನಾಗರೀಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ: ಆರಗ ಜ್ಞಾನೇಂದ್ರ