ಅಗರ್ತಲ: ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ 16 ಬಾಂಗ್ಲಾದೇಶದ (Bangladesh) ಪ್ರಜೆಗಳನ್ನು ಪೊಲೀಸರು ಬಂಧಿಸಿದ ಘಟನೆ ತ್ರಿಪುರಾದ (Tripura) ಅಗರ್ತಲಾ ರೈಲ್ವೆ ನಿಲ್ದಾಣದಲ್ಲಿ (Agartala Railway Station) ನಡೆದಿದೆ.
ಬಂಧಿತರಲ್ಲಿ ಮೂವರು ಮಹಿಳೆಯರು. 16 ಬಾಂಗ್ಲಾದೇಶಿ ಪ್ರಜೆಗಳನ್ನು ಮಂಗಳವಾರ ರಾತ್ರಿ ಅಗರ್ತಲಾ ರೈಲು ನಿಲ್ದಾಣದಿಂದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ರೈಲು ಹತ್ತುವ ಮೊದಲು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನುಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ ಗೌರವ: ದ್ರೌಪದಿ ಮುರ್ಮು
ಅಗರ್ತಲಾ ರೈಲು ನಿಲ್ದಾಣವು ಬಾಂಗ್ಲಾದೇಶದ ಗಡಿಯಿಂದ ಸುಮಾರು 6 ಕಿ.ಮೀ ದೂರದಲ್ಲಿದೆ. ಬಂಧಿತರು ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲು ಮತ್ತು ಉದ್ಯೋಗದ ಹುಡುಕಾಟದಲ್ಲಿ ಭಾರತಕ್ಕೆ ಪ್ರವೇಶಿಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ವಿನೇಶ್ ಫೋಗಟ್ ಅರ್ಜಿ ವಜಾ – ಸಿಗಲ್ಲ ಬೆಳ್ಳಿ ಪದಕ
20 ರಿಂದ 40 ವರ್ಷ ವಯಸ್ಸಿನ 16 ಬಾಂಗ್ಲಾದೇಶೀಯರಲ್ಲಿ ಹದಿಮೂರು ಮಂದಿ ರಾಜಶಾಹಿ ವಿಭಾಗದ ಚಪೈನವಾಬ್‌ಗಂಜ್ ಜಿಲ್ಲೆಯ ನಿವಾಸಿಗಳಾಗಿದ್ದರೆ, ಉಳಿದ ಮೂವರು ಢಾಕಾ ವಿಭಾಗದ ಗಾಜಿಪುರ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಾಸ್ಪದ ಕುಕ್ಕರ್ ಸ್ಫೋಟ – ಓರ್ವ ಸಾವು, ಮತ್ತೋರ್ವ ಗಂಭೀರ
ಕಳೆದ ಮೂರು ತಿಂಗಳಿನಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಸುಮಾರು 250 ಬಾಂಗ್ಲಾದೇಶಿ ಪ್ರಜೆಗಳು ಮತ್ತು 32 ರೋಹಿಂಗ್ಯಾಗಳನ್ನು ಜಿಆರ್‌ಪಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಮತ್ತು ತ್ರಿಪುರ ಪೊಲೀಸರು ಅಗರ್ತಲಾ ರೈಲು ನಿಲ್ದಾಣ ಮತ್ತು ತ್ರಿಪುರದ ವಿವಿಧ ಸ್ಥಳಗಳಿಂದ ಬಂಧಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು : ಯದುವೀರ್