ಮಡಿಕೇರಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಆರೋಪಿಗಳಿಗೆ ನ್ಯಾಯಾಲಯ (Court) ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ 21 ಮಂದಿ ಆರೋಪಿಗಳನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆಯ ಪೊಲೀಸರು (Police) ಬಂಧಿಸಿದ್ದಾರೆ.
ಮಡಿಕೇರಿಯ ವಿವಿಧ ಕಾಫಿ ಎಸ್ಟೇಟ್ ಸೇರಿದಂತೆ ಹಲವೆಡೆ ಪೊಲೀಸರು ಮುಂಜಾನೆ 5 ಗಂಟೆ ವೇಳೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕಳ್ಳತನ ಹಾಗೂ ಚೆಕ್ ಬೌನ್ಸ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಜನರನ್ನು ಬಂಧಿಸಲಾಗಿದೆ. ಬಂಧಿಸಲಾದ ಆರೋಪಿಗಳಿಗೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು, ಆದರೂ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್
ಬಂಧಿಸಲಾದ ಹೆಚ್ಚಿನ ಜನ ಅಸ್ಸಾಂನಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ಗೆ ರಿಲೀಫ್; ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್