ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನೇ (Headmaster) ಹಲವು ಬಾರಿ ಅತ್ಯಾಚಾರ (Rape) ಮಾಡಿರುವ ಘಟನೆ ಸಂಬಂಧ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತನ್ನದೇ ಶಾಲೆಯ 13 ವರ್ಷದ ವಿದ್ಯಾರ್ಥಿನಿಯನ್ನು (Student) ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಮುಖ್ಯಶಿಕ್ಷಕ ಆಕೆಯನ್ನು ಕಳೆದ ಒಂದು ವರ್ಷದಿಂದ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ ಎಂದು ದೂರು ನೀಡಲಾಗಿದೆ. ಇದನ್ನೂ ಓದಿ: ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಅತ್ಯಾಚಾರ ಯತ್ನ
- Advertisement -
- Advertisement -
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 3 ತಿಂಗಳ ಗರ್ಭಿಣಿ ಎಂದು ತಿಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ನಂತರ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಪ್ತ ಸಮಾಲೋಚನೆ ಮಾಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: Viral Video: ಬಾನೆಟ್ ಮೇಲೆ ವ್ಯಕ್ತಿಯನ್ನ ಮಲಗಿಸಿ BMW ಕಾರು ಚಲಾಯಿಸಿದ ಅಪ್ರಾಪ್ತ!
- Advertisement -