ಬೆಂಗಳೂರು: ಐಷಾರಾಮಿ ಕಾರುಗಳನ್ನು (Luxury Cars) ಕಳವು ಮಾಡುತ್ತಿದ್ದ ಮೂವರು ಖತರ್ನಾಕ್‌ಗಳನ್ನು ಬೆಂಗಳೂರಿನ (Bengaluru) ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಸಾಫ್ಟ್‌ವೇರ್ ಮೂಲಕ ಹ್ಯಾಕ್ ಮಾಡಿ ಕಾರುಗಳ ಡೋರ್ ಓಪನ್ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಎಸ್ಕೇಪ್ ಆಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: 10,000 ಹೆಕ್ಟೇರ್ ಬೆಳೆ ಹಾನಿ – ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ, ರೈತರ ಕಣ್ಣಲ್ಲಿ ನೀರು
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ