CrimeDistrictsKarnatakaLatestMain PostShivamogga

ಶ್ರೀಗಂಧ ಕಳ್ಳನ ಬಂಧನ – 910 ಕೆಜಿ ಶ್ರೀಗಂಧ ವಶ

Advertisements

ಶಿವಮೊಗ್ಗ: ತುಂಗಾನಗರ ಠಾಣೆ ಪೊಲೀಸರು ಹಾಗು ಅರಣ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 910 ಕೆಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಟಿಪ್ಪುನಗರದ 7ನೇ ತಿರುವಿನ ಗೋಡೌನ್‍ವೊಂದರಲ್ಲಿ, ಆರೋಪಿ ಅಪ್ಸರ್ 910 ಕೆಜಿ ಗಂಧದ ತುಂಡುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:  ಮಾಜಿ ಶಾಸಕ, ಜೆಡಿಎಸ್ ನಾಯಕ ಕೋನರೆಡ್ಡಿ ಕಾಂಗ್ರೆಸ್ ಸೇರ್ಪಡೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಬಂಧಿತ ಆರೋಪಿ ಅಪ್ಸರ್ ಬೇರೆ-ಬೇರೆ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ತೆಗೆದುಕೊಂಡು ಬಂದು ಸಂಗ್ರಹಿಸಿಟ್ಟಿದ್ದ. ಇದನ್ನು ಅಮರಾವತಿಗೆ ಮಾರಾಟ ಮಾಡಲು ಯತ್ನಿಸಿದ್ದ ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ ಎಂದರು.

ಬಂಧಿತ ಆರೋಪಿ ಅಪ್ಸರ್ ವಿರುದ್ಧ ಈ ಹಿಂದೆ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಯಾವುದೇ ಮಾಹಿತಿ ಇಲ್ಲ. ಅರಣ್ಯ ಇಲಾಖೆಯಲ್ಲಿ ಮಾಹಿತಿ ಇದ್ದು, ಈತನ ವಿರುದ್ಧ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published.

Back to top button