ವಿಜಯಪುರ: ಅಕ್ರಮವಾಗಿ ವನ್ಯಜೀವಿಗಳ (Wild Animals) ಅಂಗಾಂಗಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಂದಗಿ (Sindagi) ತಾಲ್ಲೂಕಿನ ಬಾಗಲೂರ (Bagalur) ಬಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಹಾರಾಷ್ಟ್ರದ (Maharashtra) ಅಸವಲದಾರಾ ಗ್ರಾಮದ ಪವನ್ ಹಾಗೂ ಭೋಸಲೆ ಎಂದು ತಿಳಿದುಬಂದಿದೆ. ಆರೋಪಿಗಳಿಂದ ಕೃಷ್ಣಮೃಗದ ಕೊಂಬು, ತಲೆಬುರುಡೆ, ಚರ್ಮಗಳು ಹಾಗೂ ವಿವಿಧ ಜಾತಿಯ ವನ್ಯ ಪ್ರಾಣಿಗಳ ಅಂಗಾಂಗಗಳನ್ನು ವಶ ಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ಔಷಧಗಳ ಹಾವಳಿ- 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು
ಆರೋಪಿಗಳ ಬಳಿ ಏನೆಲ್ಲ ಇತ್ತು?
807 ಉಡದ ಶಿಶ್ನಗಳು, 116 ಇಂದ್ರಜಾಲಗಳು, 2 ಕಾಡು ಬೆಕ್ಕಿನ ಪಾದಗಳು, 2 ಕಾಡು ಬೆಕ್ಕು ಉಗುರುಗಳು, 3 ಕರಡಿಯ ಉಗುರುಗಳು, 28 ನೀರು ಪಕ್ಷಿಗಳ ಕಾಲುಗಳು, 2 ಉಡದ ಕಾಲುಗಳು, 73 ಗೂಬೆಯ ಪುಕ್ಕಗಳು, 4 ಕರಡಿಯ ಹಲ್ಲುಗಳು, 32 ಮುಂಗಸಿಯ ಕಾಲುಗಳು, 7 ಮುಂಗುಸಿಯ ದವಡೆಗಳು, 16 ಮುಂಗುಸಿಯ ಚರ್ಮದಿಂದ ಮಾಡಿದ ಉಂಡೆಗಳು, 26 ಕಾಡು ಹಂದಿಯ ಹಲ್ಲುಗಳು, 3 ಅಪರಿಚಿತ ಕಾಡು ಪ್ರಾಣಿಯ ಉಗುರುಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಸಿಂದಗಿ ಸಿಐಡಿ ಅರಣ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಗ್ಯಾಂಗ್ ಸ್ಟಾರ್ ಅತಿಕ್ ಪುತ್ರ ಎನ್‌ಕೌಂಟರ್‌ಗೆ ಬಲಿ