ಹಾಸನ: ಅಗ್ನಿಸಾಕ್ಷಿಯಾಗಿ ತಾಳಿ ಕಟ್ಟಿದ ಪತಿಯನ್ನೇ ಹತ್ಯೆಗೈದು, ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಹೋಗಿ ಮಹಿಳೆಯೊಬ್ಬಳು ಸಿಕ್ಕಿಬಿದ್ದಿರುವ ಘಟನೆ ಹಾಸದಲ್ಲಿ ನಡೆದಿದೆ.
ಜೂನ್ 5ರ ರಾತ್ರಿ ಬೈಕ್‍ನಿಂದ ಬಿದ್ದ ಸ್ಥಿತಿಯಲ್ಲಿ ಕೃಷ್ಣೇಗೌಡ(52) ಸಾವನ್ನಪ್ಪಿದ್ದರು. ಮೂಲತಃ ಶಾಂತಿಗ್ರಾಮ ಹೋಬಳಿ ಬಸ್ತಿಹಳ್ಳಿ ಗ್ರಾಮದ ಕೃಷ್ಣೇಗೌಡ, ಮೊಸಳೆಹೊಸಳ್ಳಿ ಸಮೀಪ ಹೆಂಡತಿ ಮನೆಯಲ್ಲಿಯೇ ವಾಸವಿದ್ದರು. ಮನೆಯ ಸಮೀಪ ರಸ್ತೆಯಲ್ಲಿ ಕೃಷ್ಣೇಗೌಡ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಈ ಬಗ್ಗೆ ಅನುಮಾನಗೊಂಡ ಪೊಲೀಸರಿಗೆ ವ್ಯಕ್ತಿಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅಸಲಿ ಸತ್ಯ ತಿಳಿದು ಬಂದಿದೆ.
ಶಾಂತಿಗ್ರಾಮ ಹೋಬಳಿ ಬಸ್ತಿಹಳ್ಳಿ ಗ್ರಾಮದ ಕೃಷ್ಣೇಗೌಡ ಮತ್ತು ಗುಡುಗನಹಳ್ಳಿ ಗ್ರಾಮದ ಜ್ಯೋತಿ ಅವರನ್ನು 23 ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ನಡುವೆ ಪ್ರತಿದಿನ ಕೃಷ್ಣೇಗೌಡರೊಂದಿಗೆ ಜ್ಯೋತಿ ಜಗಳ ತೆಗೆದು, ಕೆಲವು ವೇಳೆ ಹಲ್ಲೆ ಸಹ ಮಾಡುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ದೇವಾಲಯದ ರಥ ಉರುಳಿ ಬಿದ್ದು ಇಬ್ಬರು ಸಾವು – ನಾಲ್ವರಿಗೆ ಗಾಯ
ಇದೇ ಜಗಳ ವಿಕೋಪಕ್ಕೆ ತಿರುಗಿ ಹರಿತವಾದ ಆಯುಧದಿಂದ ಹೊಡೆದು, ಕತ್ತುಹಿಸುಕಿ ಕೊಲೆ ಮಾಡಿದ್ದಾಳೆ. ಈ ಕೊಲೆಯನ್ನು ಮರೆಮಾಚಲು ಅಪಘಾತವಾಗಿದೆ ಎಂದು ಬಿಂಬಿಸಲು ಬೈಕ್ ಸಮೇತ ಮೃತದೇಹವನ್ನು ರೈಸ್ ಮಿಲ್ ಹತ್ತಿರ ರಸ್ತೆಗೆ ರಾತ್ರೋರಾತ್ರಿ ತಂದು ಹಾಕಿದ್ದಾರೆ. ಕೃಷ್ಣೇಗೌಡನನ್ನು ಕೊಲೆ ಮಾಡಲು ಆತನ ಪತ್ನಿ ಜ್ಯೋತಿಗೆ, ಜ್ಯೋತಿಯ ತಾಯಿ ಪುಟ್ಟಮ್ಮ ಕೂಡ ಸಾಥ್ ನೀಡಿದ ಆರೋಪ ಕೇಳಿ ಬಂದಿದೆ.
ಈ ಪ್ರಕರಣ ಸಂಬಂಧ ಇದೀಗ ಸ್ವಾಮಿಗೌಡ ಅವರು ಗೊರೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರಿಗೆ ವ್ಯಕ್ತಿಯ ಪತ್ನಿ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ಟಾಲಿನ್ ರಾಜಕೀಯ ಸ್ಟಂಟ್ ಮಾಡುತ್ತಿದ್ದಾರೆ: ತಮಿಳುನಾಡು ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ