ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಅಸ್ಸಾಂ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಕೋರ್ಟ್‍ಗೆ ಹಾಜರಾಗದ ಕಾರಣ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.
Advertisement
ಏನಂತ ಟ್ವೀಟ್ ಮಾಡಿದ್ರು?: ಮೋದಿಜಿ 12ನೇ ಕ್ಲಾಸ್ ಪಾಸ್ ಮಾಡಿರೋದು. ಅನಂತರದ ಡಿಗ್ರಿಗಳೆಲ್ಲ ನಕಲಿ ಎಂದು ಕೇಜ್ರಿವಾಲ್ ಈ ಹಿಂದೆ ಟ್ವೀಟ್ ಮಾಡಿದ್ದರು.
Advertisement
ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಸುರ್ಜೋ ರಂಗ್‍ಫರ್ ಎಂಬವರು ಕೇಜ್ರಿವಾಲ್ ವಿರುದ್ಧ ದಿಪು ಕೋರ್ಟ್‍ನಲ್ಲಿ ದೂರು ದಾಖಲಿಸಿದ್ದರು. ಇವರ ದೂರಿನನ್ವಯ ಕೇಜ್ರಿವಾಲ್ ವಿರುದ್ಧ ಐಪಿಸಿ ಸೆಕ್ಷನ್ 499, 500 ಹಾಗೂ 501ರ ಅಡಿ ಪ್ರಕರಣ ದಾಖಲಾಗಿದೆ.
Advertisement
ಅಸ್ಸಾಂನ ದಿಪು ಚೀಫ್ ಜುಡಿಸಿಯಲ್ ಮ್ಯಾಜಿಸ್ಟೇಟ್ ಕೋರ್ಟ್ ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‍ಗೆ ಸಮನ್ಸ್ ಜಾರಿ ಮಾಡಿತ್ತು. ಆದ್ರೆ ಅವರು ಕೋರ್ಟ್‍ನಲ್ಲಿ ಹಾಜರಾಗಿರಲಿಲ್ಲ. ಈ ಕಾರಣಕ್ಕೆ ಇದೀಗ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.