ಬೆಳಗಾವಿ: ರಾಜ್ಯದ ರೈತರ ಜೊತೆ ಮತ್ತೆ ಆಕ್ಸಿಸ್ ಬ್ಯಾಂಕ್ ಕಣ್ಣಾ ಮುಚ್ಚಾಲೆ ಆಟ ಆರಂಭಿಸಿದ್ದು, ಈ ಬಾರಿ ಮತ್ತೆ ಜಿಲ್ಲೆಯ ರೈತರೊಬ್ಬರಿಗೆ ಬಂಧನದ ವಾರೆಂಟ್ ನೀಡಿದೆ.
ಜಿಲ್ಲೆಯ ಸವದತ್ತಿ ತಾಲೂಕಿನ ಮಾಟೊಳಿ ಗ್ರಾಮದ ರೈತ ರುದ್ರಪ್ಪ ಛಬ್ಬಿ ಎಂಬವರಿಗೆ ಮುರಗೋಡ ಪೊಲೀಸರು ನಿನ್ನೆ ಬಂಧನ ವಾರಂಟ್ ನೀಡಿದ್ದಾರೆ. ಇದರಿಂದಾಗಿ ಗಾಬರಿಗೊಂಡ ರುದ್ರಪ್ಪ ರೈತ ಹೋರಾಟಗಾರರ ಬಳಿ ತಮ್ಮ ತನ್ನ ದುಃಖ ತೋಡಿಕೊಂಡಿದ್ದಾರೆ.
Advertisement
ಈ ಹಿಂದೆಯೇ ಯಾವುದೇ ಬಂಧನ ವಾರಂಟ್ ನೀಡುವುದಿಲ್ಲ ಎಂದು ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದರು. ಆದರೆ ಈಗ ಮತ್ತೆ ರೈತರಿಗೆ ಬಂಧನ ವಾರೆಂಟ್ ನೀಡಲಾಗುತ್ತಿದೆ. ರಾಜ್ಯದ ಕೆಲವು ಭಾಗಗಳಲ್ಲಿ ತೀವ್ರ ಬರಗಾಲ ಎದುರಾಗಿದ್ದು, ರೈತರಿಗೆ ಸಾಲ ಮರುಪಾವತಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
Advertisement
Advertisement
ಇತ್ತೀಚೆಗಷ್ಟೇ ಆಕ್ಸಿಸ್ ಬ್ಯಾಂಕ್ ನೀಡಿದ್ದ ನೋಟಿಸ್‍ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಅಶೋಖ ಖನಗಾವಿ ಜಯಗಳಿದ್ದಾರೆ. ಈ ಮೂಲಕ ಕೋಲ್ಕತ್ತಾ ಹೈಕೊರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಅಶೋಕ ಖನಗಾವಿ ಹೋರಾಟ ರಾಜ್ಯದ ರೈತರಿಗೆ ಮಾದರಿಯಾಗಿದ್ದು, ಈ ಆದೇಶ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವ ರೈತರಿಗೆ ಅನುಕೂಲವಾಗಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews