ಬೆಂಗಳೂರು: ಉದ್ಯೋಗಿಗಳಿಗೆ ಸರ್ಕಾರಕ್ಕೆ ವಂಚನೆ ಎಸಗಿದ ಆರೋಪದಲ್ಲಿ ಟೀಂ ಇಂಡಿಯಾ (Team India) ಮಾಜಿ ಆಟಗಾರ ರಾಬಿನ್ ಉತ್ತಪ್ಪ (Robin Uthappa) ಬಂಧನಕ್ಕೆ ವಾರೆಂಟ್ (Arrest Warrent) ಜಾರಿಯಾಗಿದೆ.
ಪಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ (Pulakeshinagar Police Station) ಪತ್ರ ಬರೆದಿದ್ದಾರೆ. ಇದೇ ತಿಂಗಳು ನಾಲ್ಕರಂದು ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು ರಾಬಿನ್ ಉತ್ತಪ್ಪ ಪುಲಕೇಶಿ ನಗರದ ನಿವಾಸಿಯಾಗಿರುವ ಕಾರಣ ಅಲ್ಲಿನ ಠಾಣೆಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ
Advertisement
Advertisement
ಏನಿದು ಆರೋಪ?
ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸಿಲ್ಲ.
Advertisement
ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿಕೊಂಡು ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ಪಿಎಫ್ ಹಣ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.