ಬೆಂಗಳೂರು: ಬಾಂಗ್ಲಾ ದೇಶದಿಂದ ಬಂದು ಭಾರತದಲ್ಲಿ ಹಿಂದೂ ಆಗಿ ಅಕ್ರಮವಾಗಿ ಭಾರತೀಯ ಸಾರ್ವಭೌಮತ್ವ ಪಡೆದಿದ್ದ, ಮಹಿಳೆಯೊಬ್ಬಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ರೋನಿ ಬೇಗಂ ಅಕ್ರಮವಾಗಿ ಗಡಿ ನುಸುಳಿದ್ದ ಮಹಿಳೆ. ಬೇಗಂ 2006 -2007 ರಲ್ಲಿ ಅಕ್ರಮವಾಗಿ ಭಾರತದ ಗಡಿ ನುಸುಳಿದ್ದು, 2015 ರಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದಳು. ಅವಳು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದಳು. ಮಹಿಳೆಯು ನಿತೀನ್ ಕುಮಾರ್ ಎಂಬಾತನನ್ನು ಬಾಂಬೆಯಲ್ಲಿ ವಿವಾಹವಾಗಿದ್ದಳು. ಹಿಂದೂ ಸಂಪ್ರದಾಯದಂತೆ ವಿವಾಹವಾಗಿ ಹೆಸರು ಬದಲಿಸಿಕೊಂಡು ಪಾಯಲ್ ಗೋಷ್ ಎಂದು ಮರು ನಾಮಕರಣ ಮಾಡಿಕೊಂಡಿದ್ದಳು. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಕೇರಳ ಸಚಿವ – ರಾಜೀನಾಮೆಗೆ ಬಿಜೆಪಿ ಆಗ್ರಹ
ನಕಲಿ ದಾಖಲೆ ಕೊಟ್ಟು ಭಾರತದ ಪ್ರಜೆಯಾಗಿ ಮಾರ್ಪಾಡು ಮಾಡಿಕೊಂಡಿದ್ದಳು. ಈ ವೇಳೆ ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಮಹಿಳೆಯು ನಕಲಿ ದಾಖಲೆ ಮುಖಾಂತರ ಓಟರ್ ಐಡಿ, ಆಧಾರ್ ಕಾರ್ಡ್ ಕ್ರಿಯೇಟ್ ಮಾಡಿಕೊಂಡಿದ್ದು, ವೆಸ್ಟ್ ಬೆಂಗಾಲ್ ಏರ್ ಪೋರ್ಟ್‍ನಲ್ಲಿ ಲಾಕ್ ಆಗಿದ್ದಾಳೆ. ಇದನ್ನೂ ಓದಿ: ಋತುಸ್ರಾವದ ರಕ್ತ ಸೇವಿಸುತ್ತೇನೆ, ಫೇಸ್ ಮಾಸ್ಕ್ ಆಗಿ ಬಳಸುತ್ತೇನೆ
ಈ ಕುರಿತು ಎಫ್‍ಆರ್‍ಆರ್‍ಒ ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಂದೂವರೆ ವರ್ಷದ ನಂತರ ರೋನಿ ಬೇಗಂನನ್ನು ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆ ಅಕ್ರಮವಾಗಿ ದಾಖಲಾತಿ ಮಾಡಿಕೊಟ್ಟವರನ್ನು ಸಹ ಹುಡುಕಲು ಪೊಲೀಸರು ಬಲೆ ಬೀಸಿದ್ದಾರೆ.