ಚಂಡೀಗಢ: ಬರೋಬ್ಬರಿ 142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.
ಈ ಘಟನೆ ಹರಿಯಾಣದ (Hariyana) ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಿನ್ಸಿಪಲ್ ಮೇಲೆ ಈ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ಆರಂಭದಲ್ಲಿ 60 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ (Sexual Harassment) ಆರೋಪ ಹೊರಿಸಿದ್ದರು. ಆದರೆ ಇದೀಗ ಅದರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.
Advertisement
ಆರೋಪವೇನು..?: 55 ವರ್ಷದ ಪ್ರಾಂಶುಪಾಲರು ಮೊದಲು ನಮ್ಮನ್ನು ಆಫೀಸಿಗೆ ಕರೆಯುತ್ತಾರೆ. ಬಳಿಕ ತಮ್ಮ ಜೊತೆ ಅಶ್ಲೀಲವಾಗಿ ನಡೆದುಕೊಳ್ಳುತ್ತಾರೆ ಎಂದು ಸಂತ್ರಸ್ತೆಯರು ದೂರಿರುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ದೇಶದಲ್ಲಿ ‘ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್’ ಆಯೋಜನೆ: ಅನುರಾಗ್ ಠಾಕೂರ್
Advertisement
Advertisement
ಹರಿಯಾಣ ಪೊಲೀಸರು ನವೆಂಬರ್ 6 ರಂದು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಹರಿಯಾಣ ರಾಜ್ಯ ಮಹಿಳಾ ಆಯೋಗವು ಪೊಲೀಸರಿಗೆ ಅಲ್ಟಿಮೇಟಮ್ ನಂತರ ಬಂಧನ ನಡೆದಿದೆ. ಜಿಂದ್ ಜಿಲ್ಲಾಧಿಕಾರಿ ಪ್ರಕರಣವನ್ನು ಖಚಿತಪಡಿಸಿದ್ದಾರೆ. ಈ ಕುರಿತು ವಿವಿಧ ಇಲಾಖೆಗಳಿಂದ ತನಿಖೆ ನಡೆಯುತ್ತಿದೆ.
Advertisement
ಶಾಲೆಯ ಕೆಲವು ವಿದ್ಯಾರ್ಥಿನಿಯರಿಂದ ಪ್ರಾಥಮಿಕ ದೂರನ್ನು ಹರಿಯಾಣ ರಾಜ್ಯ ಮಹಿಳಾ ಆಯೋಗವು ಸೆಪ್ಟೆಂಬರ್ 14 ರಂದು ಪೊಲೀಸರಿಗೆ ರವಾನಿಸಿತು ಆದರೆ ಅಕ್ಟೋಬರ್ 30 ರಂದು ಮಾತ್ರ ಕ್ರಮ ತೆಗೆದುಕೊಳ್ಳಲಾಯಿತು. ನಂತರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಲಾಗಿತ್ತು. ಶಿಕ್ಷಣ ಇಲಾಖೆ ಆರೋಪಿಯನ್ನು ಅಕ್ಟೋಬರ್ 27 ರಂದು ಅಮಾನತುಗೊಳಿಸಿದೆ.