– ಶಾಸಕ ಶಿವಲಿಂಗೇಗೌಡರಿಂದ ವಿಜಯೋತ್ಸವ ಮೆರವಣಿಗೆ
ಹಾಸನ: ಜಿಲ್ಲೆಯ ಅರಸೀಕೆರೆ (Arsikere) ನಗರಸಭೆ ವಾರ್ಡ್‌ಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ (Congress) ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದೆ.
ಅರಸೀಕೆರೆ ನಗರಸಭೆಯ 8 ವಾರ್ಡ್‌ಗಳಿಗೆ ನ.23 ರಂದು ಉಪಚುನಾವಣೆ ನಡೆದಿದ್ದು, ಇಂದು (ನ.26) ಫಲಿತಾಂಶ ಹೊರಬಿದ್ದಿದೆ. ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಿದ್ದು, ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.ಇದನ್ನೂ ಓದಿ: ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು
ಆರು ವಾರ್ಡ್‌ಗಳಲ್ಲಿ ಜೆಡಿಎಸ್, ನಾಲ್ಕರಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಕೆಲ ವಾರ್ಡ್‌ನಲ್ಲಿ ಮೈತ್ರಿ ಮಾಡಿಕೊಂಡಿದ್ದರೂ ದೋಸ್ತಿಗಳಿಗೆ ತೀವ್ರ ಹಿನ್ನಡೆಯಾಗಿದೆ. ಜೆಡಿಎಸ್‌ನಿಂದ ಗೆದ್ದು, ಬಿಜೆಪಿ ಜೊತೆ ಗುರುತಿಸಿಕೊಂಡ ಆರೋಪದಲ್ಲಿ ಏಳು ಸದಸ್ಯರು ಅನರ್ಹಗೊಂಡಿದ್ದರು. ಒಂದು ಸ್ಥಾನ ರಾಜೀನಾಮೆಯಿಂದ ತೆರವಾಗಿತ್ತು.
ಒಟ್ಟು ಎಂಟು ಸ್ಥಾನಗಳಿಗೆ ನ.23 ರಂದು ಮತದಾನ ನಡೆದಿದ್ದು, ಇಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಅರಸೀಕೆರೆ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾಂಗ್ರೆಸ್‌ನಿಂದ ವಿಜಯೋತ್ಸವ ನಡೆಸಲಾಯಿತು. ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಶಾಸಕ ಕೆ.ಎಂ.ಶಿವಲಿಂಗೇಗೌಡ ಗೆದ್ದು ಬೀಗಿದರು. ಬಳಿಕ ಅಭ್ಯರ್ಥಿಗಳ ಜೊತೆ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗಿಯಾಗಿದರು.ಇದನ್ನೂ ಓದಿ: BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್