ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನದವನ್ನು ರದ್ದುಗೊಳಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಇದು ಯಾವ ರೀತಿಯ ಅರ್ಜಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಅರ್ಜಿದಾರ ಎಂ.ಎಲ್.ಶರ್ಮಾ ಅವರಿಗೆ ಇದು ಯಾವ ರೀತಿಯ ಅರ್ಜಿ? ನೀವು ಏನನ್ನು ಪ್ರಶ್ನೆ ಮಾಡುತ್ತಿದ್ದೀರಿ? ನಿಮ್ಮ ಮನವಿ ಏನು ಎಂದು ಖಾರವಾಗಿ ಪ್ರಶ್ನಿಸಿದರು. ನಿಮ್ಮ ಅರ್ಜಿಯನ್ನು ನಾನು ಅರ್ಧಗಂಟೆ ಓದಿದ್ದೇನೆ. ನನಗೆ ಅರ್ಥ ಆಗಲಿಲ್ಲ ಎಂದು ರಂಜನ್ ಗೊಗೋಯ್ ಹೇಳಿದರು.
Advertisement
ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್, ಎಸ್‍ಎ ಬೊಬ್ಡೆ, ಎಸ್‍ಎ ನಾಜೀರ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ಇಂದು ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ 6 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು.
Advertisement
Advertisement
ಕಾಶ್ಮೀರ ಟೈಮ್ಸ್ ಸಂಪಾದಕರು ಮಾಧ್ಯಮಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ತೆಗೆದುಹಾಕುವ ವಿಚಾರದಲ್ಲಿ ನಾವು ಸ್ವಲ್ಪ ಸಮಯವನ್ನು ನೀಡಲು ಬಯಸುತ್ತೇವೆ ಎಂದು ಹೇಳಿದರು. ಈ ವೇಳೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಕಾಶ್ಮೀರ ಟೈಮ್ಸ್ ಜಮ್ಮುವಿನಿಂದ ಪ್ರಕಟವಾಗುತ್ತದೆ ಹೊರತು ಶ್ರೀನಗರದಿಂದಲ್ಲ. ಯಾಕೆ ಶ್ರೀನಗರಿಂದ ಮುದ್ರಣ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
Advertisement
ಲ್ಯಾಡ್‍ಲೈನ್ ಮತ್ತು ಬ್ರಾಡ್‍ಲೈನ್ ಸಂಪರ್ಕ ಮರುಸ್ಥಾಪಿಸಲಾಗುತ್ತದೆ. ಇವತ್ತು ಸಂಜೆಯ ಒಳಗಡೆ ಇವುಗಳು ಮತ್ತೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇಂದು ಜಮ್ಮು ಕಾಶ್ಮೀರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಿಂದ ಕರೆ ಬಂದಿದೆ ಎಂದು ಅರ್ಜಿದಾರರ ಗಮನಕ್ಕೆ ತಂದರು.
ಈ ವೇಳೆ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಣೆಯಾಗುತ್ತದೆ. ಭದ್ರತಾ ಸಂಸ್ಥೆಯ ಮೇಲೆ ನ್ಯಾಯಾಲಯ ನಂಬಿಕೆ ಇಡಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದರು. ನ್ಯಾಯಾಲಯ ಮುಂದಿನ ವಿಚಾರಣೆಗಾಗಿ ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಿಲ್ಲ.