ತೆಲುಗು ನಟಿ ಹೇಮಾ (Hema) ಬೆಂಗಳೂರಿನ ರೇವ್ ಪಾರ್ಟಿ (Bengaluru Rave Party) ವಿಚಾರವಾಗಿ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸಂಕಷ್ಟ ನಟಿಗೆ ಎದುರಾಗಿದೆ. ತೆಲುಗು ಕಲಾವಿದರ ಸಂಘದಿಂದ ಹೇಮಾ ಅಮಾನತಿಗೆ ಚರ್ಚೆ ನಡೆದಿದೆ. ಇದನ್ನೂ ಓದಿ:ಅರ್ಜುನ್ ಸರ್ಜಾ ಪುತ್ರಿ ಮದುವೆ- ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ
ಬೆಂಗಳೂರಿನ ರೇವ್ ಪಾರ್ಟಿ ವಿಚಾರ ಬೆಳಕಿಗೆ ಬಂದ ದಿನದಿಂದ ತಾವು ಹೈದರಾಬಾದ್‌ನಲ್ಲಿರೋದಾಗಿ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಈ ವೇಳೆ ತೆಲುಗು ಕಲಾವಿದರ ಸಂಘದ ಅಧ್ಯಕ್ಷ ನಟ ಕಮ್ ನಿರ್ಮಾಪಕ ಮಂಚು ವಿಷ್ಣು ಅವರು ಹೇಮಾ ಪರ ಮಾತನಾಡಿದ್ದರು. ಆದರೆ ಈಗ ಸಂಘದಿಂದ ಹೇಮಾ ಅವರನ್ನು ಅಮಾನತುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಇದನ್ನೂ ಓದಿ:ಅರ್ಜುನ್ ಸರ್ಜಾ ಪುತ್ರಿ ಮದುವೆ- ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ
ಇತ್ತೀಚೆಗೆ ಮಂಚು ವಿಷ್ಣು ಅವರು, ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಸದ್ಯದ ಮಾಹಿತಿ ಪ್ರಕಾರ, ಹೇಮಾ ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ಸಾಬೀತಾಗಿದೆ. ಆ ಕಾರಣದಿಂದಲೇ ಹೇಮಾ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೇಮಾರನ್ನು ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ.
ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೇಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.