ಭೋಪಾಲ್: ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಸಿಬಿಐ ತನಿಖೆಗೆ ನಿರ್ಬಂಧ ಹಾಕಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಭ್ರಷ್ಟಾಚಾರ ಹಾಗೂ ಅಕ್ರಮಗಳು ಹೊರ ಬೀಳುತ್ತದೆ ಎನ್ನುವ ಕಾರಣಕ್ಕೆ ಸಿಬಿಐ ಅನ್ನು ಹೊರಗಿಟ್ಟಿದ್ದೀರಾ? ಸಿಬಿಐ ಅನ್ನು ಹೊರಗಿಟ್ಟರೆ ನಿಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಮುಂದೆ ಏನಾಗುತ್ತದೋ ಎಂಬ ಭಯಕ್ಕೆ ಸಿಬಿಐ ಸಂಸ್ಥೆಯನ್ನು ತಮ್ಮ ರಾಜ್ಯಗಳಿಂದ ನಿರ್ಬಂಧಿಸಿದ್ದಾರೆಂದು ಕಿಡಿಕಾರಿದರು.
Advertisement
Advertisement
ರಾಜ್ಯಗಳಲ್ಲಿ ನಡೆಯುವ ಹಲವು ಗಂಭೀರ ಪ್ರಕರಣಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಲೇಬೇಕಾಗುತ್ತದೆ. ಅದನ್ನು ತಡೆಯಲು ಯಾವುದೇ ರಾಜ್ಯಕ್ಕೂ ಸಾಧ್ಯವಿಲ್ಲ. ನಮ್ಮದು ಸಂಯುಕ್ತ ಗಣರಾಜ್ಯ ರಾಷ್ಟ್ರವಾಗಿದೆ. ಒಂದು ವೇಳೆ ಇದರ ಮೇಲೆ ನಿಯಂತ್ರಣ ಸಾಧಿಸಲು ಮುಂದಾದರೆ, ಗಣರಾಜ್ಯದ ಮೇಲೆಯೇ ಪರಿಣಾಮ ಬೀರುತ್ತದೆ. ಹೀಗಾಗಿ ಸಿಬಿಐ ಸಂಸ್ಥೆಗೆ ನಿಷೇಧ ಹೇರಲು ಸಾಧ್ಯವಿಲ್ಲ ಹೇಳಿದರು.
Advertisement
ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಚಾರಣೆಯಲ್ಲಿ ತೃಣಮೂಲ ಕಾಂಗ್ರೆಸ್ಸಿನವರ ಹೆಸರು ಕೇಳಿಬಂದರೆ, ಪಶ್ಚಿಮ ಬಂಗಾಳ ಸರ್ಕಾರ ಏನೂ ಮಾಡಲು ಸಾಧ್ಯವಾಗುವುದಿಲ್ಲ. ಆಂಧ್ರ ಪ್ರದೇಶವು ಯಾವುದೋ ನಿರ್ದಿಷ್ಟ ವಿಚಾರಕ್ಕೆ ಸಿಬಿಐಗೆ ನಿರ್ಬಂಧಿಸಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಮುಂದಿನ ದಿನಗಳಲ್ಲಿ ಏನಾಗುತ್ತದೊ ಎಂಬ ಭಯದಿಂದ ಹೀಗೆ ಮಾಡಿರಬಹುದೆಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
Advertisement
ಏನಿದು ಸಿಬಿಐ ನಿರ್ಬಂಧ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಕೇಂದ್ರ ತನಿಖಾ ದಳ(ಸಿಬಿಐ)ವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜ್ಯಗಳಿಂದ ಸಿಬಿಐಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿತ್ತು. ಅಲ್ಲದೇ ಕೇಂದ್ರದ ಯಾವುದೇ ತನಿಖಾ ತಂಡ ರಾಜ್ಯದಲ್ಲಿ ವಿಚಾರಣೆ ನಡೆಸಬೇಕೆಂದರೆ, ಮೊದಲು ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕೆಂಬ ಷರತ್ತನ್ನು ವಿಧಿಸಿವೆ. ಇದನ್ನೂ ಓದಿ: ಸಿಬಿಐಗೆ ಶಾಕ್ ನೀಡಿದ ಚಂದ್ರಬಾಬು ನಾಯ್ಡು
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews