ಮಂಗಳೂರು: ಲೋಕಸಭಾ ಚುನಾವಣೆ (Loksabha Election 2024) ಸಮೀಪಿಸುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರುವ ಬಗ್ಗೆ ಭಾರೀ ಕುತೂಹಲ ಮೂಡಿಸಿತ್ತು. ಈ ನಡುವೆ ಇದೀಗ ಅರುಣ್ ಕುಮಾರ್ ಪುತ್ತಿಲ (Arun Kumar Puttila) ಅವರು ಈ ಬಾರಿಯ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂಬುದು ಸದ್ಯದ ಸುದ್ದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಶಾಕ್ ಎದುರಾಗಿದೆ.
Advertisement
ಇಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಬಿಜೆಪಿ (BJP) ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಆದರೆ ಇಲ್ಲಿಯ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ. ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.
Advertisement
Advertisement
ಬಹಿರಂಗವಾಗಿ ಪುತ್ತೂರು ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಅದರೆ ಅದ್ಯಾವುದೂ ಈವರೆಗೆ ಸಫಲವಾಗಿಲ್ಲ. ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಂಘಟನೆ ಇದ್ರೆ ಅದು ಪುತ್ತಿಲ ಪರಿವಾರ. ಈಗಾಗಲೇ ನಾವು ಚಾಪು ಮೂಡಿಸಿದ್ದೇವೆ. ಮುಂದೆ ಇನ್ನೂ ಹೆಚ್ಚು ಸೇವೆ ಸಲ್ಲಿಸುವ ಸಲುವಾಗಿ ನಮ್ಮ ಆರೋಗ್ಯ ಘಟಕದಿಂದ ಬೆಟ್ಟಂಪಾಡಿ ವಿಭಾಗದಲ್ಲಿ ಮಾ.3ಕ್ಕೆ ಅಂಬುಲೆನ್ಸ್ ಸೇವೆ ಆರಂಭಿಸಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್ ಭಾರತ್’ ವಿಮೆ!
Advertisement
ಮುಂದಿನ ದಿನ ಜಿಲ್ಲೆಯಾದ್ಯಂತ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಸಂಘಟನೆಯನ್ನು ರಾಜ್ಯಕ್ಕೆ ವಿಸ್ತರಿಸಲಿದ್ದೇವೆ. ಸಮಾಲೋಚನಾ ಸಭೆಯ ಬಳಿಕ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಇರಬೇಕೆಂದು ನಾವು ತೀರ್ಮಾನ ಕೈಗೊಂಡಿದ್ದೇವೆ. ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ರಾಜ್ಯಕ್ಕೂ ಸೇವಾ ಸಂಘಟನೆ ವಿಸ್ತರಣೆ ಮಾಡಲಿದ್ದೇವೆ ಎಂದು ಹೇಳಿದರು.