ನವದೆಹಲಿ: ವಿಶೇಷ ಭದ್ರತಾ ಪಡೆ (SPG) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ (Arun Kumar Sinha) ಅವರು ನಿಧನರಾಗಿದ್ದಾರೆ.
61 ವರ್ಷದ ಸಿನ್ಹಾ ಅವರು ಕಳೆದ ಕೆಲ ತಿಂಗಳಿನಿಂದ ಕಿಡ್ನಿ (Kidney) ಸಂಬಂಧಿತ ಕಾಯಿಲೆಯಿಂದ ಬಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಹರಿಯಾಣದ ಗುರುಗ್ರಾಮ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Advertisement
Advertisement
ಸಿನ್ಹಾ ಅವರು 1987ರ ಬ್ಯಾಚ್ ಕೇರಳ (Kerala) ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದರು. ಆ ಬಳಿಕ 2016 ರಿಂದ ಎಸ್ಪಿಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಪ್ರಧಾನಿ ಮತ್ತು ಮಾಜಿ ಪ್ರಧಾನಿಗಳ ಭದ್ರತೆಯ ಉಸ್ತುವಾರಿ ವಹಿಸಿದ್ದರು. ಇತ್ತೀಚೆಗಷ್ಟೇ ಅವರ ಸೇವೆ ವಿಸ್ತರಣೆ ಮಾಡಲಾಗಿತ್ತು. ಇದನ್ನೂ ಓದಿ: ತಾತನ ಹೆಸರು ಗೊತ್ತಿಲ್ಲವೆಂದರೆ ತಾತ ಇಲ್ಲವೆಂದಲ್ಲ- ಜಿ.ಪರಮೇಶ್ವರ್ ಹೇಳಿಕೆಗೆ ಬಿಜೆಪಿ ಕಿಡಿ
Advertisement
Advertisement
ಸಿನ್ಹಾ ಅವರು ಎಸ್ಪಿಜಿ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮೊದಲು ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ವಿಶೇಷ ಸೇವೆ ಮತ್ತು ಸಂಚಾರ) ಆಗಿದ್ದರು.
Web Stories